Advertisement
ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿಸಿ ಸಮಸ್ಯೆ ಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಗಿರಲಿದ್ದು, ಸಮಸ್ಯೆ ಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಸಮಸ್ಯೆ ಸ್ಥಳದಲ್ಲಿ ಬಗೆಹರೆಯದಲ್ಲಿ ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಆ ಗ್ರಾಮದಲ್ಲಿಯೇ ಮತ್ತೂಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲನೆ ಮಾಡುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟನೆ
ಯಲ್ಲಿ ತಿಳಿಸಿದ್ದಾರೆ.