ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮೇ 27ರಂದು ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿಸಿ ಸಮಸ್ಯೆ ಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಸಾರ್ವಜನಿಕರು ನೇರವಾಗಿಯೂ ಅಹವಾಲುಗಳನ್ನು ಗಂಜಿಮಠ ಗ್ರಾಮ ಪಂಚಾಯತ್‌ಗೆ ನೀಡಬಹುದಾಗಿದೆ.
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಗಿರಲಿದ್ದು, ಸಮಸ್ಯೆ ಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.
ಯಾವುದೇ ಸಮಸ್ಯೆ ಸ್ಥಳದಲ್ಲಿ ಬಗೆಹರೆಯದಲ್ಲಿ ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಆ ಗ್ರಾಮದಲ್ಲಿಯೇ ಮತ್ತೂಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲನೆ ಮಾಡುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟನೆ
ಯಲ್ಲಿ ತಿಳಿಸಿದ್ದಾರೆ.