Advertisement

ಮೇ 9: EWS ಕೋಟಾ ಮರುಪರಿಶೀಲನ ಅರ್ಜಿ ವಿಚಾರಣೆ

10:15 PM May 05, 2023 | Team Udayavani |

ಹೊಸದಿಲ್ಲಿ: ಆರ್ಥಿಕವಾಗಿ ಹಿಂದುಳಿದವರಿಗೆ ಸರಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಶೇ. 10ರಷ್ಟು ಮೀಸಲಾತಿ ನೀಡುವ 103ನೇ ಸಂವಿಧಾನಿಕ ತಿದ್ದುಪಡಿಯನ್ನು ಎತ್ತಿಹಿಡಿದು ಈ ಹಿಂದೆ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮೇ 9ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.

Advertisement

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಾದ ನ್ಯಾ| ಡಿ.ವೈ.ಚಂದ್ರಚೂಡ್‌ ನೇತೃತ್ವದ ಪಂಚಸದಸ್ಯ ಪೀಠ ಈ ಮರುಪರಿಶೀಲನ ಅರ್ಜಿಗಳ ವಿಚಾರಣೆ ನಡೆಸಲಿದೆ. ನ್ಯಾ| ದಿನೇಶ್‌ ಮಹೇಶ್ವರಿ, ನ್ಯಾ| ಎಸ್‌.ರವೀಂದ್ರ ಭಟ್‌, ನ್ಯಾ| ಬೇಲಾ ಎಂ. ತ್ರಿವೇದಿ ಮತ್ತು ನ್ಯಾ| ಜೆ.ಬಿ.ಪರ್ಡಿವಾಲಾ ಪಂಚ ಸದಸ್ಯ ಪೀಠದಲ್ಲಿರುವ ಇತರ ನಾಲ್ವರು ನ್ಯಾಯಾಧೀಶರಾಗಿದ್ದಾರೆ.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಉನ್ನತ ಶಿಕ್ಷಣ ಮತ್ತು ಸರಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಲು ಕೇಂದ್ರ ಸರಕಾರ 2019ರಲ್ಲಿ ಇಡಬ್ಯುಎಸ್‌ ಕೋಟಾ ಜಾರಿಗೆ ತಂದಿತು. ಎಸ್‌ಸಿ, ಎಸ್‌ಟಿ, ಒಬಿಸಿಗೆ ನೀಡಿರುವ ಶೇ.50ರಷ್ಟು ಮೀಸಲು ಹೊರತುಪಡಿಸಿ, ಪ್ರತ್ಯೇಕವಾಗಿ ಇಡಬ್ಲ್ಯುಎಸ್‌ ಕೋಟಾ ಶೇ.10ರಷ್ಟು ಮೀಸಲಾತಿ ನೀಡಲಾಗಿದೆ.
ಕಳೆದ ವರ್ಷದ ನವೆಂಬರ್‌ನಲ್ಲಿ ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರನ್ನು ಒಳಗೊಂಡ ಪೀಠ ಸರಕಾರದ ನಿರ್ಧಾರವನ್ನು ಎತ್ತಿಹಿಡಿದು 3:2ರ ಬಹುಮತದ ತೀರ್ಪು ನೀಡಿತ್ತು. ಈ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಒಟ್ಟು 9 ಅರ್ಜಿಗಳು ಸಲ್ಲಿಕೆಯಾಗಿದ್ದು ಇವೆಲ್ಲವನ್ನೂ ಒಟ್ಟಾರೆಯಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next