ದಾಂಡೇಲಿ: ಕಾಳಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಫಣಸೋಲಿ ವನ್ಯಜೀವಿ ವಲಯದಲ್ಲಿ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಡೆಸಲಾಗುತ್ತಿರುವ ಜಂಗಲ್ ಸಫಾರಿಯನ್ನು ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರ ಆದೇಶದ ಮೇರೆಗೆ ಮೇ:29 ರಿಂದ ಮುಂದಿನ ಆದೇಶ ಬರುವವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಭಾನುವಾರ ಸಂಜೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.
ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಜಂಗಲ್ ಸಫಾರಿಯನ್ನು ನಡೆಸುತ್ತಿದ್ದ ಪರಿಸರ ಅಭಿವೃದ್ಧಿ ಸಮಿತಿಯು ಜಂಗಲ್ ಸಫಾರಿಗೆ ಸಂಬಂಧಪಟ್ಟಂತೆ ಇರುವಂತಹ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕಾದ ನಿಟ್ಟಿನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಮೇ:20 ರಂದು ಪರಿಸರ ಅಭಿವೃದ್ಧಿ ಸಮಿತಿಯು ಜಂಗಲ್ ಸಫಾರಿ ನಡೆಸುತ್ತಿದ್ದ ವಾಹನವೊಂದು ಅಪಘಾತಕ್ಕೀಡಾಗಿ ವಾಹನದಲ್ಲಿದ್ದ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದರು. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಹಾಗೂ ಪ್ರವಾಸಿಗರಿಗೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಬಗ್ಗೆ ಉತ್ತಮವಾದ ಮಾಹಿತಿಯನ್ನು ಕೊಡುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ತರಬೇತಿಯನ್ನು ನೀಡಿ, ಸಿದ್ಧಪಡಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: New Parliament ನಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ: ಹೆಚ್ ಡಿಡಿ