ಮಂಡ್ಯ: ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗೆ ಜಿಲ್ಲೆಗೆ ಬಿಡುಗಡೆ ಯಾಗಿರುವ ಅನುದಾನ ನಷ್ಟವಾಗದಂತೆ ಸಂಪೂರ್ಣವಾಗಿ ಸದ್ಬಳಕೆಯಾಗಬೇಕು. ಒಂದು ವೇಳೆ ಅನುದಾನ ನಷ್ಟವಾದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನೇರ ಜವಾಬ್ದಾರರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಬುಡಕಟ್ಟು ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಡಿಸೆಂಬರ್ ಮಾಹೆಯ ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿರುವ ಎಲ್ಲ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ದಕ್ಷತೆ ಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಎಲ್ಲ ಇಲಾಖೆಗಳು ಎಸ್‌ಸಿಪಿ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡಿದ್ದು, ಆದರೆ ಟಿಎಸ್‌ಪಿಯ ಅನುದಾನ ಸಮರ್ಪಕವಾಗಿ ಸದ್ಬಳಕೆಯಾಗಿಲ್ಲ. ಕೂಡಲೇ ಟಿಎಸ್‌ಪಿಯ ಅನುದಾನ ಸದ್ಬಳಕೆಯಾಗಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಹನಿ ನೀರಾವರಿ ಯೋಜನೆಯಲ್ಲಿನ ಗೊಂದಲ ಪರಿಹರಿಸಿ
ಕೆಲವು ಇಲಾಖೆಗಳು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಅನುದಾನ ಬೋಗಸ್ ಆಗದಂತೆ ಸರಿಯಾಗಿ ಸದ್ಬಳಕೆಯಾಗಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಲಾಖೆ ಅಧಿಕಾರಿಯ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಪಂ ಸಿಇಒ ಎಸ್.ಎಂ.ಜುಲ್ ಖಾರ್ ಉಲ್ಲಾ, ಜಿಲ್ಲಾ ವಾರ್ತಾಧಿಕಾರಿ ಟಿ.ಕೆ.ಹರೀಶ್, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರಂಗೇಗೌಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.