Advertisement
ಸ್ವಾತಂತ್ರ್ಯೋತ್ಸವ ಆಚರಣೆ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಯಾವುದೇ ನ್ಯೂನತೆಗಳು ಕಂಡುಬರಬಾರದು. ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ದೇಶದ ಸ್ವಾತಂತ್ರ್ಯ ಸಂಭ್ರಮದ ಸ್ಮರಣೆಯ ಸಮಾರಂಭ ಯುವ ಪೀಳಿಗೆಗೆ ಸ್ಪೂರ್ತಿ ನೀಡುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಿದ್ಧತೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ಸಂಘಟಿಸಲು ಸೂಚಿಸಿದರು.
Related Articles
Advertisement
ಸ್ವಾತಂತ್ರ್ಯೋತ್ಸವದ ಮುನ್ನಾದಿನ ನಗರದ ಸ್ವಚ್ಛತೆ, ಕ್ರೀಡಾಂಗಣದ ಸ್ವಚ್ಛತೆ, ಸಾಧಕರ ಪುತ್ಥಳಿಗಳಿಗೆ ದೀಪಾಲಂಕಾರ, ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಕುಡಿಯುವ ನೀರಿನ ವ್ಯವಸ್ಥೆಗೆ ಪೌರಾಯುಕ್ತರಿಗೆ ಸೂಚನೆ ನೀಡಲಾಯಿತು.
ಸಮಾರಂಭದ ಸಂದರ್ಭದಲ್ಲಿ ಅಗ್ನಿಶ್ಯಾಮಕದಳ ವಾಹನ ಹಾಗೂ ಅಂಬ್ಯುಲೆನ್ಸ್ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಂಜೆ ಗುರುಭವನದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಶಾಲಾ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಕಾರ್ಯಕ್ರಮ ಸಂಯೋಜನೆ, ಪಥಸಂಚಲನ, ಧ್ವಜಾರೋಹಣ, ಸನ್ಮಾನ, ಗಣ್ಯರ ಆಮಂತ್ರಣ, ಸ್ವಾತಂತ್ರ್ಯೋತ್ಸವ ಸಂದೇಶ ರೂಪಿಸುವುದು, ವೇದಿಕೆ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ಪಥ ಸಂಚಲನ, ಮಕ್ಕಳಿಗೆ ಸಿಹಿ ವಿತರಣೆ ಸೇರಿದಂತೆ ವ್ಯವಸ್ಥಿತವಾಗಿ ನಿರ್ವಹಿಸಲು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಹಲವು ಸಮಿತಿ ರಚಿಸಲಾಯಿತು.
ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲೀಲಾವತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪೀರಜಾದೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದ ಹೆಗ್ಗಳಗಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆರ್.ವಾಸಣ್ಣ, ವಾರ್ತಾಧಿಕಾರಿ ಬಿ.ಆರ್. ರಂಗನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರಕಾಶ, ಪೌರಾಯುಕ್ತ ಬಸವರಾಜ ಜಿದ್ದಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶಾಕೀರ್ ಅಹ್ಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಸ್. ಪಾಟೀಲ, ಅಬಕಾರಿ, ಅಗ್ನಿಶ್ಯಾಮ ದಳ ಹಾಗೂ ಇತರ ಇಲಾಖಾ ಅಧಿಕಾರಿಗಳು, ಶಾಲಾ-ಕಾಲೇಜು ಮುಖ್ಯಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.