Advertisement
ಪಟ್ಟಣದ ಪ್ರವಾಸಿಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾದವ ಸಮುದಾಯವನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್‌ಅವರ ಅವಧಿ ಶೀಘ್ರದಲ್ಲೇ ಮುಕ್ತಾಯವಾಗಲಿದೆ. ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಚಿಕ್ಕನಾಯಕನಹಳ್ಳಿ ತಾಲೂಕಿನ ಡಾ| ಸತೀಶ್ ಅವರಿಗೆ ಪಕ್ಷದ ಟಿಕೆಟ್ ನೀಡಬೇಕು. ಕಳೆದ 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ, ಯಾದವ ಸಮುದಾಯದ ಯಾವೊಬ್ಬ ಮುಖಂಡನಿಗೂ ಟಿಕೆಟ್ ನೀಡದೆ ವಂಚನೆ ಮಾಡಿತು.
ಕಳೆದ ಬಾರಿ ಒತ್ತಾಯ ಮಾಡಿದ್ದರಿಂದ ಸಿದ್ದರಾಮಯ್ಯ ಅವರು ಜಯಮ್ಮ ಬಾಲರಾಜ್ ಅವರನ್ನು ನಾಮನಿರ್ದೇಶನ ಕೋಟಾದಡಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದರು. ಈಗ ಕಾಂಗ್ರೆಸ್ ಸರ್ಕಾರ ಇಲ್ಲ. ಹಾಗಾಗಿ ಟಿಕೆಟ್ ನೀಡಲು ಒತ್ತಾಯ ಮಾಡಲಾಗುತ್ತಿದೆ. ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಮುಂತಾದ ಜಿಲ್ಲೆಗಳಲ್ಲಿ ಬಹುಸಂ ಖ್ಯಾತರಾಗಿರುವ ಗೊಲ್ಲರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ. ಒಂದು ವೇಳೆ ಡಾ| ಸಾಸಲು ಸತೀಶ್ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಕೆ ನೀಡಿದರು. ಸಂಘಟನಾ ಕಾರ್ಯದರ್ಶಿ ಪದ್ಮನಾಭನ್ ಮಾತನಾಡಿ, ಕಳೆದೆರೆಡು ವಿಧಾನಸಭಾ ಚುನಾವಣೆಗಳಲ್ಲಿ ಯಾದವ ಸಮುದಾಯಕ್ಕೆ ಟಿಕೆಟ್ ನೀಡದೆ ಕಾಂಗ್ರೆಸ್ ದ್ರೋಹ ಎಸಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮುಖಂಡ ಸತೀಶ್ ಅವರಿಗೆಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.