Advertisement
ನಂತರ ಮಾತನಾಡಿದ ವಿಜಯೇಂದ್ರ ಅವರು, ನಮ್ಮ ನಾಡಿನ ಯುಗಪುರು, ಸ್ವಾಮೀಜಿಗಳು ತ್ರಿವಿಧ ದಾಸೋಹದ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ. ಹಾನಗಲ್ಲ ಶ್ರೀ ಗುರುಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಚಲನಚಿತ್ರವನ್ನಾಗಿ ಮಾಡಿರುವುದು ಸಂತಸದ ವಿಷಯವಾಗಿದೆ. ಕುಮಾರ ಶಿವಯೋಗಿಗಳು ನಡೆದು ಬಂದ ಹಾದಿ, ಸಮಾಜಕ್ಕೆ ನೀಡಿದ ಉತ್ತಮ ಸಂದೇಶ ಹಾಗೂ ನೀತಿ ಪಾಠಗಳನ್ನು ಯುವಕರಿಗೆ ತಲುಪಿಸುವ ಉದ್ದೇಶದಿಂದನಿರ್ಮಾಣ ಮಾಡಿರುವ “ವಿರಾಟಪುರ ವಿರಾಗಿ’ ಚಲನಚಿತ್ರ ರಾಜ್ಯ, ದೇಶದ ಜನರ ಮನೆ, ಮನ ತಲುಪಲಿ ಎಂದು ಹಾರೈಸಿದರು.
Related Articles
Advertisement
ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಹಾನಗಲ್ಲ ಶ್ರೀ ಗುರುಕುಮಾರ ಶಿವಯೋಗಿಗಳು ಸಂಘಟನೆ ಮಾತ್ರವಲ್ಲದೇ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಸೇರಿ ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಅಪಾರ ಕೊಡುಗೆ ನೀಡಿದ್ದಾರೆ. ಆದ್ದರಿಂದ ಅವರನ್ನು ಕಾರಣಿಕ ಯುಗ ಪುರುಷ ಎಂದು ಕರೆಯಲಾಗುತ್ತದೆ ಎಂದರು.
ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧೇಶ್ವರ ರಾಜಯೋಗಿಂದ್ರ ಮಹಾ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಗೀತ ನಿರ್ದೇಶಕ ಕದ್ರಿ ಮಣಿಕಾಂತ ಮಾತನಾಡಿದರು. ಜಡೆಯ ಶ್ರೀ ಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೀರೇಶ್ವರ ಪುಣ್ಯಾಶ್ರಮದ ಶ್ರೀ ಕಲ್ಲಯ್ಯಜ್ಜನವರು ಸಮ್ಮುಖ ವಹಿಸಿದ್ದರು.
ಶಾಸಕ ಎಚ್.ಕೆ. ಪಾಟೀಲ, ಮಾಜಿ ಶಾಸಕ ಜಿ.ಎಸ್. ಪಾಟೀಲ, ಐ.ಎಸ್. ಪಾಟೀಲ, ನಟ ಸುಚೇಂದ್ರಪ್ರಸಾದ, ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಣ್ಣ ಪಲ್ಲೇದ, ಸಂಯುಕ್ತ ಬಂಡಿ, ತೋಂಟೇಶ ಮಾನ್ವಿ, ಅಶೋಕ ರಾಮಣ್ಣವರ, ಸರೋಜ ಮಾನ್ವಿ ಮತ್ತಿತರರು ಇದ್ದರು. ಇದಕ್ಕೂ ಮುನ್ನ ಬೆಳಗಾವಿ, ಮಹಾರಾಷ್ಟ್ರದ ಸೊಲ್ಲಾಪೂರ, ಮೈಸೂರು ಸೇರಿರಾಜ್ಯದ ಆರು ಸ್ಥಳಗಳಿಂದ ಆರಂಭವಾಗಿದ್ದ “ವಿರಾಗಿ ಶ್ರೀ ಕುಮಾರೇಶ್ವರ ರಥ’ಗಳು ನಗರದ ವೀರೇಶ್ವರ ಪುಣ್ಯಾಶ್ರಮದಿಂದ ಸಮಾರೋಪ ಸಮಾರಂಭದ ಸ್ಥಳದವರೆಗೆ ಮೆರವಣಿಗೆ ಮೂಲಕ ಆಗಮಿಸಿದವು.