Advertisement

ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ: ಮಾಯಾವತಿ

10:04 AM Jun 25, 2019 | Team Udayavani |

ಲಕ್ನೋ : ಪಕ್ಷದ ಹಿತದೃಷ್ಟಿಯಿಂದ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಹೇಳಿಕೊಂಡಿದ್ದಾರೆ.

Advertisement

ಟ್ವೀಟರ್‌ನಲ್ಲಿ ಬರೆದುಕೊಂಡಿರುವ ಮಾಯಾವತಿ, ಲೋಕಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ವ್ಯವಹಾರ ನಮಗೆ ಹೀಗೆ ಮಾಡಿದರೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಎಂದು ಯೋಚಸುವಂತೆ ಮಾಡಿದೆ.ಪಕ್ಷದ ಹಿತದೃಷ್ಟಿಯಿಂದ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ ನಡೆಸುತ್ತೇವೆ ಎಂದು ಬರೆದಿದ್ದಾರೆ.

2012 ರಿಂದ 17 ರ ವರೆಗೆ ಅಖೀಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷದ ಸರ್ಕಾರವಿದ್ದ ವೇಳೆ ನಡೆದ ದಲಿತರು ಮತ್ತು ಬಿಎಸ್‌ಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳು ನಮ್ಮ ಸೋಲಿಗೆ ಕಾರಣವಾಯಿತು ಎಂದು ಹೇಳಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಮತ್ತು ಆರ್‌ಎಲ್‌ಡಿ ಮೈತ್ರಿಕೂಟ 80 ಸ್ಥಾನಗಳ ಪೈಕಿ 15 ರಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಬಿಎಸ್‌ಪಿ 10 ಮತ್ತು ಎಸ್‌ಪಿ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next