Advertisement

ಯುಪಿಯಲ್ಲಿ ಬಿಜೆಪಿ ಜಯಕ್ಕೆ ಇವಿಎಂನಲ್ಲಿನ ಗೋಲ್ ಮಾಲ್ ಕಾರಣ! ಮಾಯಾವತಿ

02:55 PM Mar 11, 2017 | Sharanya Alva |

ಲಕ್ನೋ: ಉತ್ತರಪ್ರದೇಶ ಚುನಾವಣೆಯಲ್ಲಿ ಇವಿಎಂ(ವಿದ್ಯುನ್ಮಾನ ಮತಯಂತ್ರ) ದೋಷದಿಂದಾಗಿ ಭಾರೀ ಗೋಲ್ ಮಾಲ್ ನಡೆದಿದೆ. ಹಾಗಾಗಿ ಯುಪಿ ಫಲಿತಾಂಶವನ್ನು ತಡೆಹಿಡಿಯಬೇಕು ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.

Advertisement

ಉತ್ತರಪ್ರದೇಶದಲ್ಲಿ ಮುಸ್ಲಿಂ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿಗಳಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಮಾಯಾವತಿ, ಚುನಾವಣಾ ಫಲಿತಾಂಶ ಆಘಾತ ತಂದಿರುವುದಾಗಿ ಹೇಳಿದರು. 

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಶನಿವಾರ ಲಕ್ನೋದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಯಾವತಿ, ಚುನಾವಣಾ ಆಯೋಗದ ಇವಿಎಂ(ವಿದ್ಯುನ್ಮಾನ ಮತಯಂತ್ರ)ನಲ್ಲಿ ಮೋಸ ಮಾಡಲಾಗಿದೆ ಎಂದು ದೂರಿದರು. ಇವಿಎಂ ನಲ್ಲಿ ಬೇರೆ ಪಕ್ಷಕ್ಕೆ ಮತ ಚಲಾಯಿಸಿದರೂ ಕೂಡಾ ಅದು ಬಿಜೆಪಿಗೆ ಹೋಗಿದ್ದು, ಇದರಿಂದಾಗಿ  ಬಿಜೆಪಿಗೆ ಜಯ ಸಿಕ್ಕಿದೆ ಎಂದರು.

ಭಾರತೀಯ ಜನತಾ ಪಕ್ಷ ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಯಾವತಿ, ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಚುನಾವಣಾ ಆಯೋಗವೇ ಕಾರಣ ಎಂದು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next