Advertisement

ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತ ಮಾಯಾವತಿ; ಒತ್ತಡದಲ್ಲಿ EC ಕಾರ್ಯ ನಿರ್ವಹಣೆ

08:59 AM May 17, 2019 | Sathish malya |

ಲಕ್ನೋ : ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರಿಂದು “ಮೋದಿ ಸರಕಾರದ ವೈಫ‌ಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ತನ್ನ ಸಂಚಿನ ಭಾಗವಾಗಿ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಗುರಿ ಇರಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

Advertisement

“ಒತ್ತಡಕ್ಕೆ ಗುರಿಯಾಗಿರುವ ಮುಖ್ಯ ಚುನಾವಣಾಧಿಕಾರಿಯವರ ಕೈಯಲ್ಲಿ ಲೋಕ ಸಭಾ ಚುನಾವಣೆಗಳು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯುತ್ತಿಲ್ಲದಿರುವುದು ಸ್ಪಷ್ಟವಿದೆ’ ಎಂದು ಮಾಯಾವತಿ ದೂರಿದರು.

ಕೇಂದ್ರ ಸರಕಾರದ ಒತ್ತಡಕ್ಕೆ ಮಣಿದು ಚುನಾವಣಾ ಆಯೋಗ ಪಶ್ಚಿಮ ಬಂಗಾಲದಲ್ಲಿ ರಾಜಕೀಯ ಪಕ್ಷಗಲ ಪ್ರಚಾರ ಕಾರ್ಯವನ್ನು ಮೊಟಕುಗೊಳಿಸಿದ್ದಾರೆ’ ಎಂದು ಮಾಯಾವತಿ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next