Advertisement

ಮೇ.5 ಕ್ಕೆ ಮಾಯಾವತಿ ಸಮಾವೇಶ

10:59 PM Apr 27, 2023 | Team Udayavani |

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಮೇ.5ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಎಸ್ಪಿಯ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಸಂಜೆ 4 ಗಂಟೆಗೆ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಕಾರ್ಯಕರ್ತರ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ.

Advertisement

ಸಾವಿರಾರು ಸಂಖ್ಯೆಯಲ್ಲಿ ಬಿಎಸ್ಪಿ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ರಾಜ್ಯದ 130 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದರು. ಈ ಬಾರಿ ಪುಲಕೇಶಿ ನಗರ ಕ್ಷೇತ್ರದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪಕ್ಷದ ಚಿನ್ಹೆಯಡಿ ಕಣಕ್ಕಿಳಿದಿದ್ದಾರೆ. ಗಾಂಧಿನಗರ ಕ್ಷೇತ್ರದಿಂದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸ್ಪರ್ಧಿಸಿದ್ದಾರೆ. ರಾಜ್ಯವ್ಯಾಪಿ 130 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದು ಗೆಲ್ಲುವ ಭರವಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಸಂಚಾಲಕ ಎಂ.ಗೋಪಿನಾಥ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ಮುನಿಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next