Advertisement

ಮೇಯರ್‌ ಚುನಾವಣೆ: ಇಂದು ಕೆಪಿಸಿಸಿ ವೀಕ್ಷಕರ ಆಗಮನ

11:37 AM Mar 08, 2017 | Team Udayavani |

ಮಂಗಳೂರು: ಮಂಗಳೂರು ಪಾಲಿಕೆ ಮೇಯರ್‌ ಚುನಾವಣೆಗೆ ಇನ್ನು 1 ದಿನ ಬಾಕಿ ಇರುವಂತೆಯೇ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. ಆಕಾಂಕ್ಷಿಗಳು ತಮ್ಮ ನಾಯಕರ ಮೂಲಕ ಲಾಬಿ ನಡೆಸಲು ಮುಂದಾಗಿದ್ದಾರೆ.

Advertisement

ಒಟ್ಟು  60 ಸ್ಥಾನಗಳಲ್ಲಿ  ಕಾಂಗ್ರೆಸ್‌ 35 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ ಹೊಂದಿದೆ. ಬಿಜೆಪಿ 20, ಜೆಡಿಎಸ್‌ 2, ಸಿಪಿಎಂ 1, ಪಕ್ಷೇತರ 1, ಎಸ್‌ಡಿಪಿಐ 1 ಸದಸ್ಯರನ್ನು ಹೊಂದಿದೆ. ಕಾಂಗ್ರೆಸ್‌ನ 35 ಸದಸ್ಯರಲ್ಲಿ 14 ಮಂದಿ ಮಹಿಳೆಯರು. ಮೇಯರ್‌ ಪದವಿ ಮಹಿಳಾ ಸಾಮಾನ್ಯ ವರ್ಗಕ್ಕೆ ಈ ಬಾರಿ ಮೀಸಲಾಗಿರುವುದರಿಂದ ಎಲ್ಲರೂ ಅರ್ಹರಾಗಿದ್ದಾರೆ. ಇದೀಗ ಕೊನೆಯ ಹಂತದ ಬೆಳವಣಿಗೆಯಲ್ಲಿ ಕವಿತಾ ಸನಿಲ್‌, ಪ್ರತಿಭಾ ಕುಳಾ ಹಾಗೂ ಅಪ್ಪಿ ಹೆಸರು ಮೇಯರ್‌ ಸ್ಥಾನ ರೇಸ್‌ನಲ್ಲಿ ಮುಂಚೂಣಿಯಲ್ಲಿದೆ.

ಮೇಯರ್‌ಗಾಗಿ ಆಯ್ಕೆ ಪ್ರಕ್ರಿಯೆ ಈ ಬಾರಿ ಕಠಿನವಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವೀಕ್ಷಕರು ಈ ಬಾರಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸಚಿವ ರಮಾನಾಥ ರೈ, ಶಾಸಕರು, ಪಕ್ಷದ ಹಂಗಾಮಿ ಅಧ್ಯಕ್ಷರ ನೇತೃತ್ವದಲ್ಲಿಯೂ ಸಭೆ ನಡೆಯಲಿದ್ದು, ಕಾಂಗ್ರೆಸ್‌ ಕಾರ್ಪೊರೇಟರ್‌ಗಳು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ಮಂಡಿಸಲಿದ್ದಾರೆ. ಆ ಮೂಲಕ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸುವವರ ಹೆಸರನ್ನು ಪ್ರಕಟ ಮಾಡಲಾಗುತ್ತದೆ. ಚುನಾವಣೆ ಮಾ. 9ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next