Advertisement

ಮೇಯರ್‌ ಸಂಪತ್‌ರಾಜ್‌ಗೆ ಪ್ರಾಣ ಬೆದರಿಕೆ ಕರೆ?

12:41 PM Jul 04, 2018 | |

ಬೆಂಗಳೂರು: ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಅವರಿಗೆ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಕೊಲೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.  ಅಪರಿಚಿತ ವ್ಯಕ್ತಿಗಳು ಕರೆ ಮಾಡಿ 50 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದು, ಒಂದು ವೇಳೆ ಹಣ ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

Advertisement

ಸೋಮವಾರ ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಸಂಪತ್‌ರಾಜ್‌ ಅವರಿಗೆ ಕರೆ ಮಾಡಿದ ದುಷ್ಕರ್ಮಿಗಳು ಪ್ರಾಣ ಬೆದರಿಕೆ ಹಾಕಿದ್ದಾರೆ. ಆದರೆ, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿದ ಮೇಯರ್‌ ಸಂಪತ್‌ರಾಜ್‌, ನನಗೆ ಯಾವುದೇ ಬೆದರಿಕೆ ಕೆರೆಗಳು ಬಂದಿಲ್ಲ.

ಎರಡು ದಿನಗಳಿಂದ ವಿವಿಧ ಕ್ಷೇತ್ರಗಳಲ್ಲಿ ಕಾಮಗಾರಿಗಳ ತಪಾಸಣೆ ನಡೆಸುತ್ತಿದ್ದು, ಯಾರು ಇಂತಹ ವಿಚಾರಗಳನ್ನು ಹಬ್ಬಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಇಂತಹ ಸುಳ್ಳು ಸುದ್ದಿ ಹರಡಲು ಕಾರಣವೇನು ಎಂಬುದನ್ನು ತನಿಖೆ ಮಾಡಬೇಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next