Advertisement

ಕೋವಿಡ್‌ 19 ನಿಯಂತ್ರಣ ಮಾಹಿತಿ ನೀಡಿದ ಮೇಯರ್‌

04:04 AM May 14, 2020 | Lakshmi GovindaRaj |

ಬೆಂಗಳೂರು: ನಗರದಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ  ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರಿಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ಆಡಳಿತವಿರುವಮಹಾನಗರಪಾಲಿಕೆಗಳ ಮೇಯರ್‌ ಹಾಗೂ ಉಪ ಮೇಯರ್‌ ಅವರೊಂದಿಗೆ ಜೆ.ಪಿ.ನಡ್ಡಾ ಹಾಗೂ ಬಿ.ಎಲ್‌.ಸಂತೋಷ್‌ ಬುಧವಾರ ವಿಡಿಯೋ  ಸಂವಾದ ನಡೆಸಿದರು.

Advertisement

ಈ ವೇಳೆ ಪ್ರತಿಕ್ರಿಯಿಸಿದ ಮೇಯರ್‌, ಬೆಂಗಳೂರಿನಲ್ಲಿ ಕೋವಿಡ್‌ 19 ನಿಯಂತ್ರಣಕ್ಕೆ 10 ಐಎಎಸ್‌ ಅಧಿಕಾರಿಗಳು 13 ಮಂದಿ ಕೆಎಎಸ್‌ ಸೇರಿದಂತೆ 1,643 ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸೋಂಕು  ಚಿಕಿತ್ಸೆಗೆ 28 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದ್ದು, ಈಗ ವಿಕ್ಟೋರಿಯಾ ಹಾಗೂ ಸಿ.ವಿ.ರಾಮನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 750 ಹಾಸಿಗೆ, ಸಿ.ವಿ.ರಾಮನ್‌ ನಗರ ಆಸ್ಪತ್ರೆಯಲ್ಲಿ 150 ಹಾಸಿಗೆ  ಸೌಲಭ್ಯ ಇದೆ ಎಂದು ಮಾಹಿತಿ ನೀಡಿದರು. ಹೋಟೆಲ್‌ ಮತ್ತು ಹಾಸ್ಟೆಲ್‌ಗ‌ಳಲ್ಲಿ ಕ್ವಾರಂಟೈನ್‌ನಲ್ಲಿ ಇರುವವರಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಕಂಟೈನ್ಮೆಂಟ್‌ ಪ್ರದೇಶಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡ ಲಾಗುತ್ತಿದೆ  ಎಂದು ಮಾಹಿತಿ ನೀಡಿದರು. ಈ ವೇಳೆ ಉಪಮೇಯರ್‌ ರಾಮಮೋಹನ್‌ ರಾಜು ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next