Advertisement

ಮಾರುಕಟ್ಟೆಯಲ್ಲಿ ಅನೈರ್ಮಲ್ಯಕಂಡು ಮೇಯರ್‌ ಆಕ್ರೋಶ

10:54 AM Jul 15, 2017 | |

ಬೆಂಗಳೂರು: ಕೆ.ಆರ್‌.ಮಾರುಕಟ್ಟೆ ಗೆ ಶುಕ್ರವಾರ ದಿಢೀರ್‌ ಭೇಟಿ ನೀಡಿದ ಮೇಯರ್‌ ಜಿ.ಪದ್ಮಾವತಿ ಅವರು, ಮಾರುಕಟ್ಟೆಯಲ್ಲಿ ಸ್ವತ್ಛತೆ ಕಾಪಾಡದ ಮಳಿಗೆದಾರರು ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 

Advertisement

ಸ್ಮಾರ್ಟ್‌ಸಿಟಿ ಯೋಜನೆಯಡಿ ಕೆ.ಆರ್‌.ಮಾರುಕಟ್ಟೆ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಪರಿಶೀಲನೆ ನಡೆಸಿದ ಅವರು, ಮಾರುಕಟ್ಟೆಯ ಸುತ್ತಮುತ್ತಲಿನ ಭಾಗಗಳಲ್ಲಿ ಸ್ವತ್ಛತೆ ಕಾಪಾಡದ ಹಾಗೂ ತ್ಯಾಜ್ಯ ವಿಂಗಡಣೆ ಮುಂದಾಗದ ಮಳಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. 

ಮಾರುಕಟ್ಟೆಯ ಸುತ್ತಲಿನ ಭಾಗದಲ್ಲಿ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿ ಹಾಗೂ ಒಳಾಂಗಣದಲ್ಲಿ ಅಗತ್ಯವಿರುವ ವಿದ್ಯುತ್‌ ದೀಪಗಳನ್ನು ಅಳವಡಿಕೆ ಮಾಡುವಂತೆ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಈ ಕಾಮಗಾರಿಗಳಿಗೆ ಅಗತ್ಯವಾದ ಅನುದಾನವನ್ನು ಮೇಯರ್‌ ನಿಧಿಯಿಂದ ನೀಡುವ ಭರವಸೆ ನೀಡಿದರು.

ಪಾದಚಾರಿ ಮಾರ್ಗದ ಬಳಿ ತ್ಯಾಜ್ಯ ಸಂಗ್ರಹಣೆ ವಾಹನದಿಂದ ದುರ್ವಾಸನೆ ಹರಡುತ್ತಿರುವುದನ್ನು ಗಮನಿಸಿದ ಮೇಯರ್‌, ಗುತ್ತಿಗೆದಾರರಿಗೆ 50 ಸಾವಿರ ದಂಡ ವಿಧಿಸಿದರು. ಜತೆಗೆ ತ್ಯಾಜ್ಯ ವಿಂಗಡಣೆ ಮಾಡದ ಮಳಿಗೆದಾರರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. 

ಮಾರುಕಟ್ಟೆ ಕಟ್ಟಡದಲ್ಲಿ ಇಂದಿರಾ ಕ್ಯಾಂಟಿನ್‌!
ಬಿಬಿಎಂಪಿಯ ಎರಡನೇ ಮಹಡಿಯಲ್ಲಿ ಇಂದಿರಾ ಕ್ಯಾಂಟಿನ್‌ ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮೇಯರ್‌ ಜಿ.ಪದ್ಮಾವತಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಎರಡನೇ ಮಹಡಿಯನ್ನು ಪರಿಶೀಲನೆ ನಡೆಸಿದ ಅವರು ಇಲ್ಲಿ ಕ್ಯಾಂಟಿನ್‌ ನಿರ್ಮಾಣದಿಂದ ವ್ಯಾಪಾರಿಗಳೊಂದಿಗೆ ಗ್ರಾಹಕರಿಗೂ ಅನುಕೂಲವಾಗಲಿದೆ ಎಂದರು. 

Advertisement

ಬಿಬಿಎಂಪಿ ವತಿಯಿಂದ ಉದ್ಯಾನ, ಮೈದಾನಗಳಲ್ಲಿ ಕ್ಯಾಂಟಿನ್‌ ನಿರ್ಮಿಸುತ್ತಿಲ್ಲ. ಜಾಗದ ಕೊರತೆಯಿರುವ ಭಾಗಗಳಲ್ಲಿ ಮಾತ್ರ ಖಾಲಿ ಜಾಗ ಬಳಸಿಕೊಳ್ಳಲಾಗುತ್ತಿದೆ. ಬಡವರಿಗೆ ಕಡಿಮೆ ದರದಲ್ಲಿ ಊಟ ಪೂರೈಕೆ ಮಾಡುವುದು ಬಿಜೆಪಿಗೆ ಇಷ್ಟವಿಲ್ಲ. ಹೀಗಾಗಿ ಅವರು ಕ್ಯಾಂಟಿನ್‌ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 
-ಜಿ.ಪದ್ಮಾವತಿ, ಮೇಯರ್‌

Advertisement

Udayavani is now on Telegram. Click here to join our channel and stay updated with the latest news.

Next