Advertisement

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಮಯೂರಿ

11:03 AM Jun 12, 2020 | sudhir |

ಬೆಂಗಳೂರು : ಅಶ್ವಿನಿ ನಕ್ಷತ್ರ ಧಾರಾವಾಹಿಯ ಮೂಲಕ ತನ್ನನ್ನು ಪರಿಚಯಿಸಿಕೊಂಡ ಕನ್ನಡದ ಬೆಡಗಿ ಮಯೂರಿ ಕ್ಯಾತರಿ ಅವರು ಇಂದು ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

Advertisement

ಬೆಂಗಳೂರಿನ ಜೆಪಿ ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಂಜಾನೆಯ ಬ್ರಾಹ್ಮಿ ಮಹೂರ್ತದಲ್ಲಿ ಅರುಣ್, ಮಯೂರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಅರುಣ್ ಜೊತೆ ಮಯೂರಿ ೧೦ ವರ್ಷಗಳಿಂದ ಪ್ರೀತಿಸುತ್ತಿದ್ದರು, ಮನೆಯವರ ಒಪ್ಪಿಗೆಯೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಅಶ್ವಿನಿ ನಕ್ಷತ್ರ ಧಾರಾವಾಹಿಯ ಮೂಲಕ ಕಿರುತೆರೆಗೆ ಪ್ರವೇಶಿಸಿದ ಮಯೂರಿ ನಂತರ ಇಷ್ಟಕಾಮ್ಯ , ಕೃಷ್ಣ ಲೀಲಾ, ರುಸ್ತುಂ ಹೀಗೆ ಹಲವಾರು ಸಿನೆಮಾಗಳಲ್ಲಿ ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next