ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್, ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಪೀಠದವರು ಎಲ್ಲರೂ ಸೇರಿ ಬಸವ ಧರ್ಮ ಆಗಬೇಕು. ಪ್ರತ್ಯೇಕ ಲಿಂಗಾಯತ ಧರ್ಮ ಆದರೆ ನಮಗೆ ಸೌಲಭ್ಯ ಸಿಗುತ್ತದೆ. ಮುಸ್ಲಿಂ, ಜೈನರ ಮಾದರಿಯಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ದೊರೆಯುತ್ತದೆ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಕಾರಣವಲ್ಲ ಎಂದ ಅವರು, ಇದೀಗ ಪಂಚಮಸಾಲಿ ಮೀಸಲಾತಿಗೆ ಹೋರಾಟ ಮಾಡುತ್ತಿದ್ದಾರೆ. ಪ್ರತ್ಯೇಕ ಧರ್ಮ ಆದರೆ ಅವರಿಗೂ ಮೀಸಲಾತಿ ಸಿಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:ಮೀಸಲಾತಿ ಸಿಕ್ಕರೆ ಅಭಿನಂದನೆ, ಇಲ್ಲವಾದಲ್ಲಿ ಧರಣಿ ಮುಂದುವರಿಕೆ : ಜಯ ಮೃತ್ಯುಂಜಯ ಸ್ವಾಮೀಜಿ
ಈ ಮಧ್ಯೆ, ಎಂ.ಬಿ.ಪಾಟೀಲ್ ಅವರ ಹೇಳಿಕೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಕ್ರಿಯೆಗೆ ನಿರಾಕರಿಸಿ, ಈ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಖಂಡನೆ
ಚಾಮರಾಜನಗರ ಜಿಲ್ಲಾಧಿಕಾರಿ ಲಸಿಕೆ ಪಡೆಯದಿದ್ದರೆ ಪಡಿತರ ಇಲ್ಲ ಎಂದು ಆದೇಶ ಹೊರಡಿಸಿರುವುದು ಖಂಡನೀಯ. ಮೊದಲು ಸರ್ಕಾರ ಸಮರ್ಪಕ ಲಸಿಕೆ ನೀಡಲಿ.
-ಎಂ.ಬಿ.ಪಾಟೀಲ್