Advertisement

ಕೋವಿಡ್ ತಡೆಗೆ ವ್ಯಾಕ್ಸಿನೆಷನ್  ಮಾಡುವುದೊಂದೇ ಶಾಶ್ವತ ಪರಿಹಾರ : ಎಂ.ಬಿ.ಪಾಟೀಲ

04:13 PM May 26, 2021 | Team Udayavani |

ವಿಜಯಪುರ: ಕೋವಿಡ್ ಮಹಾಮಾರಿ ಮೊದಲನೇ ಅಲೆ ಮುಗಿದು, ಸದ್ಯದ ಎರಡನೇ ಅಲೆಯ ಹಾನಿ ಅನುಭವಿಸುತ್ತಿರುವ ಭಾರತ ಭವಿಷ್ಯದಲ್ಲಿ 3ನೇ ಅಲೆ ಆತಂಕವನ್ನು ಎದುರಿಸುತ್ತಿದೆ. ಈ ಕಾರಣದಿಂದ ದೇಶದಲ್ಲಿ ಲಕ್ಷಾಂತರ ಜನರನ್ನು ಕಳೆದುಕೊಂಡಿದ್ದು, ಆ ಕುಟುಂಬಗಳು ಬೀದಿಗೆ ಬಂದಿವೆ. ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ (ವ್ಯಾಕ್ಸಿನೆಷನ್) ಮಾಡುವುದೊಂದೇ ಶಾಶ್ವತ ಪರಿಹಾರ ಎಂದು ಮಾಜಿ ಸಚಿವ, ಬಬಲೇಶ್ವರ ಶಾಸಕ ಡಾ.ಎಂ.ಬಿ.ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.

Advertisement

ಬುಧವಾರ ವಿಜಯಪುರದಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಳಿದ ಎಲ್ಲ ವಿಷಯಗಳನ್ನು ಬದಿಗಿರಿಸಿ, ಅತೀ ಕಡಿಮೆ ಅವಧಿಯಲ್ಲಿ 100 ಕೋಟಿ ಜನರಿಗೆ ವ್ಯಾಕ್ಸಿನೆಷನ್ ಮಾಡಿಸುವ ಅಭಿಯಾನ ಕೈಗೊಂಡು, ಅದಕ್ಕೆ ಎಲ್ಲ ಅಗತ್ಯ ನೆರವು ಒದಗಿಸಿ, ವಿಶೇಷ ಆದ್ಯತೆ ನೀಡಬೇಕಾದ ತುರ್ತು ಅಗತ್ಯವಿದೆ. ಆಗ ಮಾತ್ರ ಈ ಸಮಸ್ಯೆಗೆ ಸಂಪೂರ್ಣ ಮತ್ತು ಶಾಶ್ವತ ಪರಿಹಾರ ಸಾಧ್ಯ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ಸ್ಪುಟ್ನಿಕ್ ವಿ ಲಸಿಕೆಯನ್ನು ದೆಹಲಿಗೆ ನೀಡಲು ಉತ್ಪಾದಕರು ಒಪ್ಪಿದ್ದಾರೆ : ಕೇಜ್ರಿವಾಲ್

ಈಗಾಗಲೇ ವ್ಯಾಕ್ಸಿನೆಷನ್ ಮುಗಿಸಿರುವ ಅಮೇರಿಕಾ, ಯೂರೋಪಿಯನ್ ರಾಷ್ಟ್ರಗಳು, ಇಸ್ರೆಲ್ ಮತ್ತಿತರ ಆ ದೇಶಗಳು ಈ ಮಹಾಮಾರಿಯಿಂದ ಮುಕ್ತವಾಗಿ ಅಲ್ಲಿನ ಜನ-ಜೀವನ ಮುಂಚಿನಂತೆ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಆ ಮಾದರಿಯಲ್ಲಿ ಭಾರತದಲ್ಲಿಯೂ 130 ಕೋಟಿ ಜನರಲ್ಲಿ ಕನಿಷ್ಠ 100 ಕೋಟಿ ಜನರನ್ನು ಗುರಿಯಾಗಿಸಿ, ಈ ಲಸಿಕೆ ಹಾಕಿಸಬೇಕು. ನಮ್ಮ ದೇಶದಲ್ಲೇ ಹೆಚ್ಚಿನ ಲಸಿಕೆ ಉತ್ಪಾದನೆ ಮಾಡಬೇಕು. ಅಗತ್ಯ ಇರುವಷ್ಟು ಬೇರೆ ರಾಷ್ಟ್ರಗಳಿಂದ ಕೂಡ ಲಸಿಕೆ ಆಮದು ಮಾಡಿಕೊಂಡು, ಒಟ್ಟಾರೆ 100 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿ ನಮ್ಮ ಸರ್ಕಾರಗಳು ಕಾರ್ಯ ಪ್ರವೃತ್ತ ಆಗಬೇಕು ಎಂದು ಶಾಸಕ ಡಾ.ಎಂ.ಬಿ.ಪಾಟೀಲ ಸಲಹೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next