Advertisement

Vijayapura: ಚುನಾವಣೆಯಲ್ಲಿ ಲಿಂಗಾಯತರನ್ನು ಸೆಳೆಯಲು ವಿಜಯೇಂದ್ರ ಅಸ್ತ್ರ: ಎಂ.ಬಿ.ಪಾಟೀಲ

12:56 PM Nov 16, 2023 | Team Udayavani |

ವಿಜಯುಪುರ : ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ, ಬುಡಕ್ಕೆ ಬೆಂಕಿ ಬಿದ್ದಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಲಿಂಗಾಯತರನ್ನು ಸೆಳೆಯಲು ಹಾಗೂ ಯಡಿಯೂರಪ್ಪ ಅವರನ್ನು ಬಳಕೆ ಮಾಡಿಕೊಂಡು ಬಿಸಾಡಲು ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

Advertisement

ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮಾತ್ರ ವಿಜಯೇಂದ್ರ ನೇಮಕ ಎಂಬಂತೆ ಬಿಜೆಪಿ ನಾಯಕರೇ ಹೇಳಿದ್ದಾರೆ. ವಿಜಯೇಂದ್ರ ನೇಮಕ ಬಹಳ ವರ್ಷ ಇರಲ್ಲ. ಮೂರು ವರ್ಷಕ್ಕೆ ಮಾತ್ರ ಸೀಮಿತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಅಂದರೆ ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಇರಲ್ಲ ಎಂದು ಪರೋಕ್ಷ ಸಂದೇಶ ನೀಡಿದ್ದಾರೆ ಎಂದು ಕುಟುಕಿದರು.

ಈ ಹೇಳಿಕೆಯಿಂದ ಯಡಿಯೂರಪ್ಪ ಅವರನ್ನು ಯಾವಾಗ ಬೇಕಾದರೂ ಬಳಸಿ, ಬಿಸಾಡಬಹುದು ಎಂಬುದೇ ಆಗಿದೆ. ಬಿಜೆಪಿ ನಾಯಕರ ಈ ಹುನ್ನಾರಕ್ಕೆ ಲಿಂಗಾಯತರು ಬಲಿಯಾಗುವುದಿಲ್ಲ ಎಂದರು.

ಯಡಿಯೂರಪ್ಪ ಅವರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿದರೂ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ. ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತರು ಬಿಜೆಪಿ ಪಕ್ಷದಿಂದ ವಿಮುಖರಾಗಿದ್ದಾರೆ. ಪರಿಣಾಮ ಯಡಿಯೂರಪ್ಪ ಅವರನ್ನು ಬಳಸಿಕೊಂಡು ಲಿಂಗಾಯತರನ್ನು ಸೆಳೆಯುವ ಬಿಜೆಪಿ ಹುನ್ನಾರ ಕೈಗೂಡದು. ಮೋದಿ, ಅಮಿತ್ ಶಾ ಅವರ ಹುನ್ನಾರ ಕೈಗೂಡದು ಎಂದು ಸಚಿವ ಎಂ.ಬಿ.ಪಾಟೀಲ ಕುಟುಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ನಾನು ಹೇಳಿದ ಲಿಸ್ಟ್ ಮಾತ್ರ ಆಗಬೇಕು ಎಂದು ಮೈಸೂರಿನಲ್ಲಿ ಹೇಳಿರುವ ವಿಷಯ ನನಗೆ ಗೊತ್ತಿಲ್ಲ. ಆದರೆ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಬಳಸಿಕೊಂಡು ಈ ಹಿಂದೆ ಮಹಾರಾಷ್ಟ್ರ ರಾಜ್ಯದಲ್ಲಿ ನನ್ನ ಧ್ವನಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಈ ಕುರಿತು ದೂರು ದಾಖಲಾಗಿ, ಆರೋಪಿಗಳ ಬಂಧನವಾಗಿತ್ತು. ಇದು ಕೂಡ ಅದೇರೀತಿ ಆಗಿರಬಹುದು ಎಂದರು.

Advertisement

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಂದ ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗುತ್ತಿದ್ದಾರೆ. ಲೋಕಸಭಾ ಚುನಾವಣೆ ವೇಳೆಗೆ ಎರಡೂ ಪಕ್ಷಗಳಲ್ಲಿ ಎಲ್ಲ ಸ್ವಚ್ಛವಾಗುರುತ್ತದೆ ನೋಡ್ತಾ ಇರಿ. ಇನ್ನೂ ಬಹಳಷ್ಟು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಸಂಖ್ಯೆಯ ವಿಷಯದಲ್ಲಿ ಎಷ್ಟು ಬೇಕಾದಷ್ಟು ಬರೆದುಕೊಳ್ಳಿ ಎಂದರು.

ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಜಿಲ್ಲಾ ಚುನಾವಣಾ ಉಸ್ತುವಾರಿ ಆಗಿರುವ ಸಚಿವ ಸತೀಶ ಜಾರಕಿಹೊಳಿ ಜಿಲ್ಲೆಗೆ ಭೇಟಿ ನೀಡಿ, ಸಭೆ ನಡೆಸಿದ್ದಾರೆ. ಪಕ್ಷದಲ್ಲಿ ಚರ್ಚಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಅಂತಿಮ‌ ನಿರ್ಣಯ ಆಗಲಿದೆ ಎಂದರು.

ಜಾತಿಗಣತಿಗೆ ಕೆಲವರು ವಿರೋಧಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಬಿ.ಪಾಟೀಲ, ಈ ವಿಷಯದಲ್ಲಿ ಪಕ್ಷದ ಮಟ್ಟದಲ್ಲಿ ಆಂತರಿಕವಾಗಿ ಚರ್ಚೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: Negative review ನೀಡಿದ 7 ವ್ಲಾಗರ್‌ಗಳ ವಿರುದ್ಧ ದೂರು ದಾಖಲಿಸಿದ ʼಬಾಂದ್ರಾʼ ಚಿತ್ರತಂಡ

Advertisement

Udayavani is now on Telegram. Click here to join our channel and stay updated with the latest news.

Next