ಶಿವಮೊಗ್ಗ: ಐರನ್ ಬಾಕ್ಸ್ ನ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ನಗರದ ಪುರಲೆ ಬಡಾವಣೆಯಲ್ಲಿ ದುರ್ಘಟನೆ ನಡೆದಿದ್ದು, ಮೃತಪಟ್ಟಿರುವ ವಿದ್ಯಾರ್ಥಿಯನ್ನು ದಾವಣಗೆರೆ ಮೂಲದ ನಿತಿನ್ (23) ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಈತ ಎಂದು ತಿಳಿದುಬಂದಿದೆ.
ಸೋಮವಾರ ರಾತ್ರಿ ಐರನ್ ಬಾಕ್ಸ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ವಿದ್ಯಾರ್ಥಿ ಸಾವಿಗೆ ನಿಖರವಾದ ಕಾರಣ ತಿಳಿದುಬರಬೇಕಿದೆ