ಲಕ್ನೋ: 24 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ದಿವ್ಯಾ ಜ್ಯೋತಿ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.
ದಿವ್ಯಾಳ ಹಾಸ್ಟೆಲ್ ಸ್ನೇಹಿತೆ ಆಕೆಯ ಕೋಣೆಗೆ ಹೋಗಿ ನೋಡಿದಾಗ ಬಾಗಿಲು ಮುಚ್ಚಿರುವುದು ಕಂಡುಬಂದಿದೆ. ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರವಿಲ್ಲ, ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೂ ದಿವ್ಯಾ ಜ್ಯೋತಿ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಸ್ನೇಹಿತರು ಕೂಡಲೇ ಮನೆ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಬಾಗಿಲು ಒಡೆದು ನೋಡಿದಾಗ ಜ್ಯೋತಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ತಪಾಸಣೆ ನಡೆಸಿದಾಗ, ಲವ್ ಬ್ರೇಕಪ್ ಆಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ಡಿಸಿಪಿ) ರವಿಕುಮಾರ್ ತಿಳಿಸಿದ್ದಾರೆ.