Advertisement

ಸಂಪುಟ ಸಮಿತಿಗೆ ಎಂಬಿಪಿ ಅಧ್ಯಕ್ಷ

02:19 AM Jun 27, 2019 | Sriram |

ಬೆಂಗಳೂರು: ಜಿಂದಾಲ್‌ಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಗೃಹ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ.

Advertisement

ಸಚಿವರಾದ ಬಂಡೆಪ್ಪ ಕಾಶೆಂಪೂರ್‌, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಈ ಕುರಿತು ಬುಧವಾರ ಅಧಿಕೃತ ಆದೇಶ ಪ್ರಕಟಣೆ ಹೊರಡಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ 3,667,31 ಎಕರೆ ಭೂಮಿಯನ್ನು ಜೆ.ಎಸ್‌.ಡಬ್ಲ್ಯೂ ಸ್ಟೀಲ್ ಸಂಸ್ಥೆಯ ಪರವಾಗಿ ಶುದ್ಧ ಕ್ರಯ ಪತ್ರಗಳನ್ನು ಜಾರಿಗೊಳಿಸುವ ಪ್ರಸ್ತಾವನೆ ಕುರಿತು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಜಿಂದಾಲ್ ಕುರಿತ ಸಂಪುಟ ಉಪ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಜವಾಬ್ದಾರಿ ನೀಡಿದರೆ ನಿರ್ವಹಿ ಸುತ್ತೇನೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next