Advertisement
ಇತ್ತೀಚೆಗೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಬಜಪೆ ಪೊಲೀಸರು ಬಂಧಿಸಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಎಂಡಿಎಂಎನ್ನು ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್‌ಗಳ ಬಗ್ಗೆ ಮಾಹಿತಿ ಲಭಿಸಿತ್ತು. ಅದರಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಮೈಸೂರಿನ ದರ್ಶನ್ ಕೆ.ಜಿ(25) ಮತ್ತು ನೈಜೀರಿಯಾ ಪ್ರಜೆಯಾಗಿದ್ದು ಬೆಂಗಳೂರಿನಲ್ಲಿ ವಾಸವಿದ್ದ ಚಿಕ ಜೋಸೇಫ್ ಇಝಿ(26)ನನ್ನು ಬಂಧಿಸಿದ್ದಾರೆ.
Related Articles
Advertisement
ಹೇರ್‌ಕಟ್ಟಿಂಗ್ ಮಾಡುತ್ತಿದ್ದ ಚಿಕ ಜೋಸೆಫ್ ಇಝಿ 2023ನೇ ಮೇ ತಿಂಗಳಲ್ಲಿ ಭಾರತಕ್ಕೆ ಉದ್ಯೋಗ ವೀಸಾದಲ್ಲಿ ಬಂದಿದ್ದ. ಬೆಂಗಳೂರಿನ ಯಲಹಂಕದಲ್ಲಿ ಹೇರ್‌ಕಟ್ಟಿಂಗ್ ಉದ್ಯೋಗ ಮಾಡುತ್ತಿದ್ದ. ಈತನ ವಿರುದ್ಧ ಈ ಹಿಂದೆಯೂ ಮಾದಕ ವಸ್ತು ಮಾರಾಟದ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು 4 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ.