Advertisement

ಅರ್ಥಪೂರ್ಣ ಮಹರ್ಷಿ ಜಯಂತಿ

03:05 PM Oct 04, 2019 | Suhan S |

ಕೊಪ್ಪಳ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದಿಂದ ಅ. 13ರಂದು ಬೆಳಗ್ಗೆ 10ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಎಡಿಸಿ ಮಾರುತಿ ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷವೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ವರ್ಷರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ನೆರೆ ಸಂತ್ರಸ್ತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಯಾವುದೇ ರೀತಿಯ ಅದ್ಧೂರಿ ಆಚರಣೆ ಇಲ್ಲದೆ, ಅತ್ಯಂತ ಸರಳವಾಗಿ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ. ಸರಕಾರ ನೀಡುವ ಅನುದಾನದಲ್ಲಿ ಹಾಗೂ ಸಮುದಾಯದ ಸದಸ್ಯರು ನೀಡುವ ಹಣದಲ್ಲಿ ಆಚರಣೆಯ ನಂತರ ಉಳಿದ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಡಬೇಕೆಂಬ ಸಮುದಾಯದ ಮುಖಂಡರ ನಿರ್ಣಯಕ್ಕೆ ಸಮ್ಮತಿಸಿದ ಎಡಿಸಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದರು.

ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಗಣ್ಯರಿಗೆ ಮಹರ್ಷಿ ವಾಲ್ಮೀಕಿ ರಾಮಾಯಣ ಪುಸ್ತಕ ವಿತರಿಸಲಾಗುತ್ತದೆ. ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕೆಂದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಈಶಪ್ಪ ಆಶಾಪೂರ, ತಹಶೀಲ್ದಾರ್‌ ಜೆ.ಬಿ. ಮಜಿ, ನಗರ ಪೊಲೀಸ್‌ ಠಾಣೆಯ ಪಿ.ಐ. ಶಿವಾನಂದವಾಲಿಕಾರ, ಸಮಾಜದ ಮುಖಂಡರಾದ ಸುರೇಶ ಡೊಣ್ಣಿ, ಶರಣಪ್ಪ ನಾಯಕ, ಮಂಜುನಾಥ ಗೊಂಡಬಾಳ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next