Advertisement

ದಡಾರ, ರುಬೆಲ್ಲಾ  ಲಸಿಕೆ ಅಪಪ್ರಚಾರ ಮಾಡಿದರೆ ಕ್ರಮ

03:45 AM Feb 03, 2017 | |

ಮಂಗಳೂರು: ದಡಾರ ಮತ್ತು ರುಬೆಲ್ಲಾ ರೋಗ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜಂಟಿ ಯೋಜನೆಯಡಿ ಆರೋಗ್ಯ ಇಲಾಖೆ ವತಿಯಿಂದ ಫೆ. 7ರಿಂದ ಮಾ. 3ರ ವರೆಗೆ  9 ತಿಂಗಳಿಧಿನಿಂದ 15 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕ ಸಚಿವ ಯು.ಟಿ. ಖಾದರ್‌ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ದಡಾರ-ರುಬೆಲ್ಲಾ ಲಸಿಕೆ ಅಭಿಯಾನ ಬಗ್ಗೆ ಕೆಲವರು ಅಪಪ್ರಚಾರ, ಗೊಂದಲ ನಡೆಸುತ್ತಿರುವುದು ಕಂಡುಬಂದಿದೆ. ಇಂತಹ ಅಪಪ್ರಚಾರ ಮಾಡುವುದು, ಸಂದೇಶಗಳನ್ನು ವಾಟ್ಸಾಪ್‌ಗ್ಳಲ್ಲಿ ಹಾಕುವುದು, ಫಾರ್ವರ್ಡ್‌ ಮಾಡುವುದು ಮುಂತಾದವುಗಳ ವಿರುದ್ಧ ಕಾನೂನು ಕ್ರಮಗಳನ್ನು ಸಂಬಂಧಪಟ್ಟ ಇಲಾಖೆ ವತಿಧಿಯಿಂದ ಕೈಗೊಳ್ಳಲಾಗುವುದು ಎಂದರು.

ದಡಾರ-ರುಬೆಲ್ಲಾ ರೋಗ ಬರದಂತೆ ತಡೆಗಟ್ಟಲು ಉತ್ತಮ ಮತ್ತು ಪರಿಣಾಮಕಾರಿಯಾಗಿರುವ ಎಂ.ಆರ್‌. ಲಸಿಕೆ ನೀಡಲಾಗುತ್ತದೆ. ಇದರ ಬಗ್ಗೆ ಪೋಷಕರಲ್ಲಿ ಯಾವುದೇ ಗೊಂದಲ ಬೇಡ. ಎಂ.ಆರ್‌. ಲಸಿಕೆ ಸುರಕ್ಷಿತ ಮತ್ತು ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣೀಕರಿಸಿದ ಲಸಿಕೆಯಾಗಿದೆ ಎಂದು ಅವರು ವಿವರಿಸಿದರು.

ಜಿಲ್ಲಾಧಿಕಾರಿ ಡಾ| ಜಗದೀಶ್‌, ಅಪರ ಜಿಲ್ಲಾಧಿಕಾರಿ ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next