Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಬಿ ಶ್ರೀರಾಮುಲು, ಹೈದರಾಬಾದಿನ ಕೊರೊನಾ ವೈರಸ್ ಸೋಂಕು ಪೀಡಿತ ವ್ಯಕ್ತಿಯು ಬೆಂಗಳೂರಿನಿಂದ ತೆರಳಿದ್ದಾಗಿ ತಿಳಿದುಬಂದಿದೆ. ಆದ್ದರಿಂದ, ಈ ವ್ಯಕ್ತಿಯ ಸ್ಥಳೀಯ ವಿಳಾಸದಲ್ಲಿ ನೆಲೆಸಿರುವ ಎಲ್ಲಾ ಸದಸ್ಯರನ್ನು ಈಗಾಗಲೇ ಗುರುತಿಸಿ, ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ ಎಂದು ರಾಮುಲು ಹೇಳಿದ್ದಾರೆ.
ತೆಲಂಗಾಣದಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ರೋಗಿ ದುಬಾೖಯಿಂದ ಬೆಂಗಳೂರಿಗೆ ಬಂದು ಎರಡು ದಿನ ವಾಸವಿದ್ದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆತ ಮೂಲತಃ ಹೈದರಾಬಾದ್ ನವನಾಗಿದ್ದು, ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕಾರ್ಯ ನಿರ್ವವಹಿಸುತ್ತಿದ್ದ. ಫೆ. 19ರಂದು ದುಬಾೖಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಈತನಿಗೂ ಥರ್ಮಲ್ ಸ್ಕ್ಯಾನಿಂಗ್ ನಡೆಸಲಾಗಿದೆ. ಆದರೆ ಯಾವುದೇ ರೋಗ ಲಕ್ಷಣ ಕಾಣಿಸಿರಲಿಲ್ಲ. ಹೀಗಾಗಿ ಮನೆಗೆ ತೆರಳಿದ್ದ. ಬಳಿಕ ಬೆಂಗಳೂರಿನ ಮನೆಯಲ್ಲಿ 2 ದಿನ ವಾಸವಿದ್ದು, ಅನಂತರ ಹೈದರಾಬಾದ್‌ಗೆ ತೆರಳಿದ್ದಾನೆ. ಅಲ್ಲಿ ಅನಾರೋಗ್ಯ ಕಾಣಿಸಿಕೊಂಡು ಆಸ್ಪತ್ರೆಗೆ ತೆರಳಿದ್ದು, ಕೊರೊನಾ ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.