Advertisement
ಇಂದು ಜಿಲ್ಲಾಡಳಿತ ಭವನದಲ್ಲಿ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಮೇಲುಸ್ತವಾರಿ ಸಮಿತಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಏರ್ಪಡಿಸಿದ್ದ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ನಗರದ ಶಾಲೆಗಳಲ್ಲಿ ಶಾಲಾ ಅವಧಿಯ ನಂತರ ಶಾಲಾ ಆವರಣ, ಕಟ್ಟಡವನ್ನು ಅನೈತಿಕ ಚಟುವಟಿಕೆಗಳಿಗಾಗಿ ಬಳಕೆ ಮಾಡುತ್ತಿರುವ ಬಗ್ಗೆಯೂ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅದರ ಸುಧಾರಣೆಗಾಗಿ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಮಹಾನಗರ ಪಾಲಿಕೆ ಉಪಮೇಯರ್ ಚನ್ನಬಸಪ್ಪ ಮಾತನಾಡಿ, ಮಹಾನಗರಪಾಲಿಕೆ ವತಿಯಿಂದ ಅಭಿವೃದ್ಧಿ ಕುಂಠಿತ ಶಾಲೆಗಳ ಉನ್ನತೀಕರಣಕ್ಕಾಗಿ ಡಾ| ಶಿವಕುಮಾರ ಶ್ರೀಗಳ ಹೆಸರಿನಲ್ಲಿ ಯೋಜನೆಯೊಂದನ್ನು ರೂಪಿಸಲಾಗಿದೆ. ಈ ಯೋಜನೆಯಡಿ ನಗರಪಾಲಿಕೆ ವ್ಯಾಪ್ತಿಯ ಸರ್ಕಾರಿ ಶಾಲೆಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಲೆಗಳಿಂದ ಬರುವ ಕ್ರಿಯಾ ಯೋಜನೆ ಗಮನಿಸಿ ಹಾಗೂ ದಾನಿಗಳಿಂದ ಸಂಗ್ರಹವಾಗುವ ನಿಧಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯಕ್ಕೆ ತಕ್ಕಂತೆ ಪಾಲಿಕೆಯಿಂದ ಶಾಲೆಗಳ ಅಗತ್ಯತೆಗಳನ್ನು ಪೂರೈಸಲು ಅಗತ್ಯ ಅನುದಾನವನ್ನು ಪಾಲಿಕೆ ವತಿಯಿಂದ ಭರಿಸಲಾಗುವುದು ಎಂದವರು ತಿಳಿಸಿದರು.
ಮಹಾನಗರಪಾಲಿಕೆ ವಿಪಕ್ಷ ನಾಯಕ ರಮೇಶ್ ಮಾತನಾಡಿ, ನಗರಪಾಲಿಕೆ ವತಿಯಿಂದ ಸಂಗ್ರಹಿಸಲಾಗುವ ಶಿಕ್ಷಣ ನಿಧಿಯನ್ನು ನಗರ ಪ್ರದೇಶದ ಸರ್ಕಾರಿ ಶಾಲೆಗಳ ವಿಕಾಸಕ್ಕಾಗಿಯೇ ವ್ಯಯ ಮಾಡುವಂತೆ ತಿಳಿಸಿದ ಅವರು ಶಿಕ್ಷಣ ರಾಷ್ಟ್ರೀಕರಣಗೊಳಿಸಿದಲ್ಲಿ ಶಾಲೆಗಳ ವಿಕಾಸ ಸಾಧ್ಯವಾಗಲಿದೆ ಎಂದವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ನಗರದ ಶಾಲೆಗಳ ಆಡಳಿತ ಮಂಡಳಿಗಳಿಂದ ಶಾಲೆಗಳಿಗೆ ಪಾಠೊಪಕರಣ, ಪೀಠೊಪಕರಣ, ಶಿಕ್ಷಕರು, ಶಾಲಾ ಕಾಂಪೌಂಡ್ ನಿರ್ಮಾಣ, ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಕಟ್ಟಡ ದುರಸ್ತಿ ಮುಂತಾದವುಗಳ ಕುರಿತು ಅನೇಕ ಶಾಲೆಗಳಿಂದ ಬೇಡಿಕೆಗಳು ಬಂದವು.
ಮಹಾನಗರ ಪಾಲಿಕೆಯ ಮೇಯರ್ ಲತಾ ಗಣೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಸುಮಂಗಳಾ ಪಿ.ಕುಚಿನಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಉಪನಿರ್ದೇಶಕ ಪಿ. ಶೇಷಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ವರಪ್ಪ, ಮಹಾನಗರಪಾಲಿಕೆ ಸದಸ್ಯರು, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಉಪಸ್ಥಿತರಿದ್ದರು.