Advertisement
ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯ. ಈ ಕಾರಣ ನೀರನ್ನು ಅನಗತ್ಯವಾಗಿ ಪೊಲು ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿ ಧಿಸಲಾಗುವುದು ಎಂದರು.
Related Articles
Advertisement
ಭೂಕುಸಿತ; ನಿಗಾ ವಹಿಸಿರಸ್ತೆ ಕಡಿತಗೊಂಡು ಸಂಪರ್ಕಕ್ಕೆ ಸಿಗದ ಪ್ರದೇಶದಲ್ಲಿ ಗರ್ಭಿಣಿಯರು, ವಯಸ್ಸಾದವರ ಪಟ್ಟಿಯನ್ನು ಸಿದ್ಧಪಡಿಸಲು ಸೂಚಿಸಿದರಲ್ಲದೆ, ಅವರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ವ್ಯವಸ್ಥೆ ಆಗಬೇಕು. ನೆಟ್‌ವರ್ಕ್ ಸಿಗದ ಪ್ರದೇಶದಲ್ಲಿ ಜನರಿಂದ ಮಾಹಿತಿಯನ್ನು ಪಡೆಯಲು ಮತ್ತು ಅವರಿಗೆ ಮಾಹಿತಿಯನ್ನು ನೀಡಲು ಪರ್ಯಾಯ ವ್ಯವಸ್ಥೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಭೂಕುಸಿತ ಉಂಟಾಗುವಂತಹ ಪ್ರದೇಶ, ಅಪಾಯಕ್ಕೆ ಸಿಲುಕಿರುವಂತಹ ಮನೆಗಳನ್ನು ಗುರುತಿಸಿ ಅಲ್ಲಿನ ಜನರನ್ನು ಬೇರೆ ಪ್ರದೇಶಗಳಿಗೆ ಸ್ಥಳಾಂತರಿಸಲು ಹಾಗೂ ಇಂತಹಾ ಸಂದರ್ಭದಲ್ಲಿ ರಕ್ಷಣೆಗೆ ಜೆಸಿಬಿ ಹಾಗೂ ಹಿಟಾಚಿ ವಾಹನಗಳ ಬಳಕೆಗೆ ಸ್ಥಳೀಯವಾಗಿ ಲಭ್ಯವಿರುವವರ ಫೋನ್ ನಂಬರ್ ಹಾಗೂ ಮಾಹಿತಿ ಸಂಗ್ರಹಿಸಿ ಪಟ್ಟಿ ಮಾಡಿಟ್ಟುಕೊಂಡು ಭೂಕುಸಿತ ಉಂಟಾಗುವ ಪ್ರದೇಶದಲ್ಲಿ ತತ್‌ಕ್ಷಣ ಬಳಕೆಗೆ ಸಿದ್ಧವಿರುವಂತೆ ನಿಗಾವಹಿಸಬೇಕು. ಶಾಲಾ ಕಟ್ಟಡಗಳ ಹಂಚಿನ ಮೇಲೆ ಬಿದ್ದು ಹಾನಿ ಉಂಟು ಮಾಡುವಂತಹ ಮರಗಳ ರೆಂಬೆಕೊಂಬೆಗಳನ್ನು ಸಹ ಕತ್ತರಿಸಲು ಅರಣ್ಯ ಇಲಾಖೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಮನಪಾ ಆಯುಕ್ತ ಆನಂದ್, ಎಸ್‌ಪಿ ರಿಷ್ಯಂತ್ ಸಿಬಿ, ಪುತ್ತೂರು ಉಪ ವಿಭಾಗಾಧಿ ಕಾರಿ ಜುಬಿನ್ ಮೋಹಾಪಾತ್ರ ಉಪಸ್ಥಿತರಿದ್ದರು. ತಾಲೂಕುಗಳಲ್ಲಿ ಕಂಟ್ರೋಲ್ ರೂಂ
“ಜಿಲ್ಲೆಯ ಪ್ರತೀ ತಾಲೂಕುಗಳ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿ ಕಾರಿಗಳು ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ರಚಿಸಿ ನೀರಿನ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕು. ಡ್ಯಾಂಗಳನ್ನು ಹೊರತುಪಡಿಸಿ ನೀರಿನ ಪರ್ಯಾಯ ಮೂಲಗಳನ್ನು ಖುದ್ದಾಗಿ ಭೇಟಿ ನೀಡಿ ಅದರ ಬಗ್ಗೆ ಪಟ್ಟಿ ತಯಾರಿಸಬೇಕು. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ದಿನಬಿಟ್ಟು ದಿನ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.