Advertisement
ಪ್ರವಾಹಪೀಡಿತ ಗ್ರಾಮಗಳು, ಸ್ಥಳಾಂತರಗೊಂಡಿರುವ ಗ್ರಾಮಗಳು, ಸಂತ್ರಸ್ತರಿಗೆ ತೆರೆಯುವ ಕಾಳಜಿ ಕೇಂದ್ರಗಳ ಬಳಿ ಕೈಗೊಳ್ಳಬೇಕಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಿರುವ ಸಿದ್ಧತೆಗಳ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಶುಕ್ರವಾರ ಅಗತ್ಯ ಸೂಚನೆಗಳನ್ನು ನೀಡಿದರು.
Related Articles
Advertisement
ಕಾಳಜಿ ಕೇಂದ್ರಗಳ ಸಮೀಪದಲ್ಲಿ ಪಿಎಚ್‌ಸಿ ಅಥವಾ ಇತರೆ ಆರೋಗ್ಯ ಸೌಲಭ್ಯಗಳು ಇಲ್ಲದಿದ್ದರೆ ಸಂಚಾರಿ ಆರೋಗ್ಯ ಘಟಕಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕು. ಚಳಿಗಾಲದ ಜತೆ ಹಬ್ಬಗಳ ಹಿನ್ನೆಲೆ ಇರುವುದರಿಂದ ಕೋವಿಡ್ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಇಲಾಖೆಯಿಂದ ಯಾವುದೇ ಲೋಪ ಆಗದಂತೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಮುನ್ನೇಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಕ್ಷಣವೇ ಸೂಚನೆ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪ್ರವಾಹ ಪರಿಸ್ಥಿತಿ ಗಂಭೀರವಾಗಿರುವ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಯೊಬ್ಬರನ್ನು ಇತರೆ ಇಲಾಖೆಗಳ ಜತೆ ಸಮನ್ವಯ ಕಾಯ್ದುಕೊಳ್ಳಲು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆಯೂ ಸಚಿವರು ಆದೇಶ ನೀಡಿದರು. ಸಭೆಯಲ್ಲಿ ಇಲಾಖೆಯ ನಾನಾ ಕಾರ್ಯಕ್ರಮಗಳು ಮತ್ತು ಯೋಜನೆಗಳ ಪ್ರಗತಿ ಪರಿಶೀಲನೆಯನ್ನೂ ಸಚಿವ ಸುಧಾಕರ್ ಪರಾಮರ್ಶಿಸಿದರು.
ಆರೋಗ್ಯ ಇಲಾಖೆ ಆಯುಕ್ತ ಡಾ. ಕೆ.ವಿ. ತ್ರಿಲೋಕಚಂದ್ರ, ವೈದ್ಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್, ಎನ್‌ಎಚ್‌ಎಂ ವ್ಯವಸ್ಥಾಪಕ ನಿರ್ದೇಶಕಿ ಅರುಂಧತಿ ಚಂದ್ರಶೇಖರ್, ಆರೋಗ್ಯ ಇಲಾಖೆ ನಿರ್ದೇಶಕ ಡಾ. ಓಂಪ್ರಕಾಶ್ ಪಾಟೀಲ್ ಹಾಗೂ ನಾನಾ ವಿಭಾಗಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಚಿವರ ಪ್ರತಿಕ್ರಿಯೆ :
ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮುಂದೆ ಚಳಿಗಾಲ ಮತ್ತು ಹಬ್ಬದ ದಿನಗಳು ಇರುವುದರಿಂದ ಕೋವಿಡ್ ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಜಿಲ್ಲಾಡಳಿತಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಟ್ಟಾರೆ ಸಂಕಷ್ಟದಲ್ಲಿರುವ ಪ್ರದೇಶಗಳ ಜನರ ಆರೋಗ್ಯ ಸಂರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದ್ದು ಅದನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದರು.