Advertisement

ಗೋವಿನ ಬಗ್ಗೆ ಅರಿವು ಮೂಡಿಸಲು ಕ್ರಮ: ಸಚಿವ ಪ್ರಭು ಚವ್ಹಾಣ್

07:13 PM Jul 17, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪಶುಸಂಗೋಪನೆ ಇಲಾಖೆ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಮತ್ತಷ್ಟು ಹತ್ತಿವಾರಗಬೇಕು ಎಂಬ ಉದ್ದೇಶದಿಂದ ಗೋ ಉತ್ಪನ್ನಗಳಿಂದ ಔಷಧ ತಯಾರಿಸುವುದು, ಸಾಮಾಜೀಕ ಜೀವನದಲ್ಲಿ ಗೋವಿನ ಪಾತ್ರ ಹಾಗೂ ಎಲ್ಲ ಜಿಲ್ಲೆಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನದ ಕುರಿತು ವ್ಯವಸ್ಥಿತವಾಗಿ ಹೆಜ್ಜೆ ಇಡುತ್ತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

Advertisement

ಗೋವಿನ ಉತ್ಪನ್ನಗಳು ನಮ್ಮ ದಿನನಿತ್ಯದ ಜೀವನದ ಅವಿಭಾಜ್ಯ ಅಂಗವಾಗಿವೆ. ಪಾರಂಪರಿಕವಾಗಿ ಗೋಮೂತ್ರ, ಸಗಣಿ ಸಹ ಔಷಧ ರೂಪದಲ್ಲಿ ಬಳಕೆಯಾಗುತ್ತಿರುವುದಲ್ಲದೆ ಅನೇಕ ಕಾಯಿಲೆಗಳು ಪಂಚಗವ್ಯದಂತಹ ವಿಶಿಷ್ಟ ಸಂಯೋಜನೆಯಿಂದ ಗುಣಮುಖವಾದ ಉದಾಹರಣೆಗಳಿವೆ. ಇದನ್ನೇ ಆಧಾರವಾಗಿಟ್ಟುಕೊಂಡು ಇಲಾಖೆಯು ಗೋಉತ್ಪನ್ನಗಳಿಂದ ಔಷಧವನ್ನು ತಯಾರಿಸಿ ಮಾನವರ ಚಿಕಿತ್ಸೆಗೆ ಬಳಸಿಕೊಳ್ಳವ ಸಾಧ್ಯತೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅನುಮತಿ ಕೋರಿದೆ ಎಂದು ಸಚಿವರು ತಿಳಿಸಿದ್ದಾರೆ.

ಶಿಕ್ಷಣದಲ್ಲಿ ಗೋವಿನ ಮಹತ್ವ: ವಿದ್ಯಾರ್ಥಿಗಳಿಗೆ ಸಾಮಾಜಿಕ ಪರಿಸರ ಅಧ್ಯಯದನ ಭಾಗವಾಗಿ ಭಾರತೀಯ ಗೋವಿನ ಜೋತೆಗಿರುವ ಮಾನವ ಸಂಬಂಧ ಹಾಗೂ ಜೈವಿಕ ವೈವಿದ್ಯತೆ, ಪರಿಸರ ಅವಲಂಬನೆ, ಪರಿಸರ ಸಂರಕ್ಷಣೆ ಕುರಿತು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ತಿಳಿ ಹೇಳುವ ಕೆಲಸ ಆಗಬೇಕಾಗಿದೆ. ಭಾರತೀಯ ಗೋವಿನ ಕುರಿತು 1 ನೇ ತರಗತಿ ಯಿಂದ 12 ನೇ ತರಗತಿಯವರೆಗೆ ಗೋವಿನ ಮತ್ತು ಪಶುಸಂಗೋಪನೆಗೆ ಸಂಬಂಧಿಸಿದಂತೆ ಪಠ್ಯವನ್ನು ಅಳವಡಿಸಿದಲ್ಲಿ ಮಕ್ಕಳಲ್ಲಿ ಗೋವಿನ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲು ಸಹಾಯವಾಗುತ್ತದೆ ಎನ್ನುವ ಉದ್ದೇಶದಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಈ ಕುರಿತಾಗಿ ಪತ್ರ ಬರೆಯಲಾಗಿದೆ. ಶಿಕ್ಷಣ ಸಚಿವರೊಂದಿಗೆ ಇದನ್ನು ಚರ್ಚಿಸಿ ಗೋವಿನ ಬಗ್ಗೆ ಪಠ್ಯವನ್ನು ಅಳವಡಿಸಲು ಕೋರಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ:ವಿಜಯಪುರ ವಿ.ನಿಲ್ದಾಣ ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್‌ಲೈನ್ ಕಂಪನಿ: ಗೋವಿಂದ ಕಾರಜೋಳ

ಗೋಶಾಲೆಯ ವಿದ್ಯುತ್ ಬಿಲ್- ಕೃಷಿ ಚಟುವಟಿಕೆ: ಇತ್ತಿಚೆಗೆ ಗೋಶಾಲೆಗಳ ಪ್ರತಿನಿಧಿಗಳೊಂದಿನ ಸಭೆ ನಡೆಸಿದ ಸಂದರ್ಭದಲ್ಲಿ ಅನೇಕ ಗೋಶಾಲೆಯ ಪ್ರತಿನಿಧಿಗಳು ವಿದ್ಯುತ್ ಬಿಲ್ ಪಾವತಿಗೆ ವಿನಾಯಿತಿ ನೀಡುವ ಕುರಿತು ಕೋರಿಕೆ ಇಟ್ಟಿದ್ದರು. ಇದನ್ನು ಪರಿಗಳಿಸಿ ಗೋಶಾಲೆಯ ಚಟುವಟಿಕೆಗಳನ್ನು ಕೃಷಿ ಚಟುವಟಿಕೆ ಎಂದು ಪರಿಗಣಿಸಿ ವಿದ್ಯುತ್ ಬಿಲ್ ಪಾವತಿಗೆ ವಿನಾಯಿತಿ ಅಥವಾ ಸಬ್ಸಿಡಿ ನೀಡುವಂತೆ ಇಂದನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗಿದೆ. ಗೋ ಸಂಪತ್ತನ್ನು ಸಂರಕ್ಷಿಸುವಲ್ಲಿ ಗೋಶಾಲೆಗಳ ಪಾತ್ರ ಬಹುದೊಡ್ಡದಾಗಿದೆ ಎಂದರು.

Advertisement

ಜಿಲ್ಲಾಧಿಕಾರಿಗಳಿಗೆ ಸೂಚನೆ: ರಾಜ್ಯದಲ್ಲಿ ಗೋಹತ್ಯೆ ನೀಷಧ ಕಾಯ್ದೆ ಸಮರ್ಪಕವಾಗಿ ಜಾರಿಯಾಗಬೇಕಾದರೆ ಪ್ರತಿಯೋಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಪಾತ್ರ ಬಹುದೊಡ್ಡದು. ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಗೋಶಾಲೆಯನ್ನು ತೆರೆಯಲು ನಿರ್ಧರಿಸಲಾಗಿದ್ದು ಇದಕ್ಕೆ ಸಂಬಂಧ್ಪಟ್ಟಂತೆ ಜಿಲ್ಲಾಧಿಕಾರಿಗಳ ಜವಾಬ್ದಾರಿ ಹೆಚ್ಚಿದೆ ಆದ್ದರಿಂದ ಗೋಶಾಲೆಗಳಿಗೆ ಆದಷ್ಟು ಬೇಗ ಸ್ಥಳ ಗುರುತಿಸಿ ಗೋಶಾಲೆ ಸ್ಥಾಪನೆಗೆ ಮುಂದಾಗಲು ಸೂಚನೆ ನೀಡಲಾಗಿದೆ. ಅಲ್ಲದೇ ಎಸ್.ಪಿ.ಸಿ.ಎ ಸಮಿತಿಯ ಅಧ್ಯಕ್ಷರು ಸಹ ಜಿಲ್ಲಾಧಿಕಾರಿಗಳೇ ಇರುವುದರಿಂದ ಇದರ ಸಮರ್ಪಕವಾದ ಅನುಷ್ಟಾನಕ್ಕೆ ಪ್ರತಿ ತಿಂಗಳ ಮೂರನೇ ಶನಿವಾರ ಅಥವಾ ಮೂರು ತಿಂಗಳಲ್ಲಿ ಎರಡು ಸಭೆಗಳನ್ನು ನಡೆಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಕಡಿಮೆ ಆಗುತ್ತಿದೆ ಇದನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಗೋವುಗಳ ಸಂಖ್ಯೆ ವೃದ್ಧಿಮಾಡಲು ಇಲಾಖೆಯಿಂದ ಎಲ್ಲ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಗೋವಿನೊಂದಿಗೆ ಧಾರ್ಮಿಕವಾಗಿ ಹಾಗೂ ಆರ್ಥಿಕವಾಗಿ ನಾವೆಲ್ಲ ಹೊಂದಿಕೊಂಡಿರುವುದರಿಂದ ಇದರ ಸಂರಕ್ಷಣೆ ಮತ್ತು ಸಂವರ್ಧನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next