Advertisement

ಆರ್ಥಿಕ ಪುನಶ್ಚೇತನಕ್ಕೆ ಕ್ರಮ:ಸಿ.ಸಿ. ಪಾಟೀಲ

05:27 PM Apr 30, 2020 | Suhan S |

ಗದಗ: ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ಕೆಲ ಷರತ್ತುಗಳೊಂದಿಗೆ ಜಿಲ್ಲೆಯಲ್ಲಿ ನಿರ್ಬಂಧಿತ ಪ್ರದಶ ಹೊರತುಪಡಿಸಿ ಆರ್ಥಿಕ ಚಟುವಟಿಕೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ತಿಳಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಡಾ| ಆನಂದ ಕೆ., ಎಸ್‌ಪಿ ಯತೀಶ ಎನ್‌. ಅವರೊಂದಿಗೆ ಸಮಾಲೋಚನೆ ನಡೆಸಿದ ಅವರು, ಗದಗ-ಬೆಟಗೇರಿ ನಗರ ವ್ಯಾಪ್ತಿಯಲ್ಲಿ ಐದು ಕೋವಿಡ್‌-19 ಪ್ರಕರಣಗಳು ಪತ್ತೆಯಾಗಿವೆ. ರಂಗನವಾಡ ಹಾಗೂ ಗಂಜಿ ಬಸವೇಶ್ವರ ಪ್ರದೇಶಗಳ ವ್ಯಾಪ್ತಿಯನ್ನು ಜಿಲ್ಲಾಡಳಿತ ನಿರ್ಬಂಧಿತ ಪ್ರದೇಶವೆಂದು ಘೋಷಿಸಿದೆ. ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನದಂತೆ ಗದಗ ತಾಲೂಕು ಹೊರತುಪಡಿಸಿ, ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳಲ್ಲಿ ಷರತ್ತು ಬದ್ಧ ವ್ಯಾಪಾರ ವಹಿವಾಟಿಗೆ, ಕೈಗಾರಿಕೆಗಳನ್ನು ಪ್ರಾರಂಭಿಸಲು ಅವಕಾಶ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ನಿರ್ಬಂಧಿಸಿರುವ ಬಾರ್‌ ಆ್ಯಂಡ್‌

ರೆಸ್ಟೊರೆಂಟ್‌, ಹೊಟೇಲ್‌, ಕ್ರೀಡೆ, ಸಾಮಾಜಿಕ ಚಟುವಟಿಕೆ, ಬಟ್ಟೆ ವ್ಯಾಪಾರ, ಕ್ಷೌರಿಕ ಅಂಗಡಿ ಹೊರತು ಪಡಿಸಿ ಸಾಮಾನ್ಯ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು. ರಾಜ್ಯ ಸರ್ಕಾರ ನೀಡಿರುವ ಎಲ್ಲ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಉಲ್ಲಂಘಿತ ಪ್ರಕರಣಗಳಲ್ಲಿ ತಕ್ಷಣ ಸಂಬಂಧಿತ ಸಂಸ್ಥೆ, ವ್ಯಾಪಾರ, ಕೈಗಾರಿಕೆಗಳನ್ನು ಸೀಲ್‌ಡೌನ್‌ ಮಾಡುವುದಾಗಿ ಸಚಿವ ಸಿ.ಸಿ. ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next