Advertisement

ಮಾಧ್ಯಮ ಕೇಂದ್ರ ಉದ್ಘಾಟನೆ

12:24 PM Feb 02, 2017 | Team Udayavani |

ಧಾರವಾಡ: ಸರ್ಕಾರವು 30 ವರ್ಷಗಳ ನಂತರ ಹುಬ್ಬಳ್ಳಿ-ಧಾರವಾಡದಲ್ಲಿ ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳು ಸಹಕಾರದಿಂದ ಕರ್ನಾಟಕ ರಾಜ್ಯ ಒಲಿಂಪಿಕ್‌ ಕ್ರೀಡಾಕೂಟ ಆಯೋಜಿಸಿದ್ದು, ಮಾಧ್ಯಮಗಳು ಉತ್ತಮ ಪ್ರಚಾರ ನೀಡುವ ಮೂಲಕ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿಸಚಿವ ವಿನಯ ಕುಲಕರ್ಣಿ ಹೇಳಿದರು. 

Advertisement

ನಗರದ ಆರ್‌.ಎನ್‌.ಶೆಟ್ಟಿ ಕ್ರೀಡಾಂಗಣ ಬಳಿ ಇರುವ ಕಸಾಪ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆರಂಭಿಸಿರುವ ಕರ್ನಾಟಕ ರಾಜ್ಯ ಒಲಿಂಪಿಕ್‌ ಕ್ರೀಡಾಕೂಟ-2017ರ ಮಾಧ್ಯಮ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. 

ಸ್ಥಳೀಯ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಒಲಿಂಪಿಕ್‌ ಕ್ರೀಡಾ ವರದಿಗಾರಿಕೆ ಒಂದು ಹೊಸ ಅನುಭವವಾಗಿದ್ದು, ಪ್ರತಿ ಕ್ರೀಡಾ ಸ್ಪರ್ಧೆಗಳ ವಿವರ ಮತ್ತು ಫಲಿತಾಂಶವನ್ನು ತಕ್ಷಣಕ್ಕೆ ನೀಡಲು ಅನುಕೂಲವಾಗುವಂತೆ ಮಾಧ್ಯಮ ಕೇಂದ್ರ ರೂಪುಗೊಂಡಿದೆ. ಕ್ರೀಡಾಸಕ್ತರು ಒಲಿಂಪಿಕ್‌ ಕ್ರೀಡೆಗಳಲ್ಲಿ ಭಾಗವಹಿಸಿ ಸ್ಪರ್ಧಾಳುಗಳಿಗೆ ಪೊತ್ಸಾಹ ನೀಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಿರಿಯ ಉಪ ನಿರ್ದೇಶಕ ಡಾ|ಸದಾಶಿವ ಮರ್ಜಿ, ಎನ್‌ಐಸಿ ಕೇಂದ್ರದ ಮೀನಾ ಕುಮಾರಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಪ್ರಚಾರ ಸಮಿತಿ ವಸಂತ ಮುಡೇìಶ್ವರ, ಪಿ.ಎಸ್‌.ಹಿರೇಮಠ, ಗುರುರಾಜ ಜಮಖಂಡಿ, ಪಿ.ಎಸ್‌.ಪರ್ವತಿ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next