Advertisement
ಪಟ್ಟಣದ ಬುಸ್ಸೇನಹಳ್ಳಿ ಸಮೀಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪತ್ರಿಕೆಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಷಡ್ಯಂತ್ರಗಳು ನಡೆಯುತ್ತಿವೆ. ಇದರಿಂದ
ವಸ್ತುನಿಷ್ಠ ಸುದ್ದಿಗಳು ಕಣ್ಮರೆಯಾಗಿ ಅನ್ಯಾಯ ಭ್ರಷ್ಟಾಚಾರಗಳಿಗೆ ಕುಮ್ಮಕು ನೀಡುವಂತಹ ವಾತಾವರಣ ನಿರ್ಮಾಣವಾಗಬಹುದು. ಯಾರೇ ಮಾಧ್ಯಮಗಳಿಗೆ ಕಡಿವಾಣ ಹಾಕುವ ಮುಂಚೆ ಯೋಚಿಸಬೇಕು. ಯಾವ ಕ್ಷೇತ್ರವಾಗಲಿ ಅಲ್ಲಿ ಅನ್ಯಾಯವಾದವರಿಗೆ ನ್ಯಾಯ ಕೊಡಿಸುವಂತಹ ನಿಟ್ಟಿನಲ್ಲಿ ಮಾಧ್ಯಮ ಕ್ಷೇತ್ರ ಕೆಲಸ ಮಾಡುತ್ತದೆ ಎಂದರು.
ಪತ್ರಿಕೋಧ್ಯಮದಲ್ಲಿ ಇಂದು ಸವಾಲುಗಳು ಹಲವಾರು ಇವೆ. ಕ್ಷಣಾರ್ಧದಲ್ಲಿ ಸುದ್ದಿ ಬಿತ್ತರಿಸುವ ಜವಾಬ್ದಾರಿ ಪತ್ರಕರ್ತರಿಗಿದೆ. ಪತ್ರಕರ್ತರು ತಮ್ಮ ಕುಟುಂಬದೊಂದಿಗೆ ಕಳೆಯುವ ಸಂತೋಷವನ್ನು ಬದಿಗೊತ್ತಿ ದಿನದ 24 ಗಂಟೆಗಳ ಕಾಲ ಸುದ್ದಿ ಬಿತ್ತರಿಸುವ ಕಾಯಕದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು. ಸಂಘದ ಅಧ್ಯಕ್ಷ ಎಚ್.ವಿ. ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಐಟಿಐ ಕಾಲೇಜ್ ಪ್ರಾಂಶುಪಾಲ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಎಂ.ಸಿ.ರವಿಕುಮಾರ್, ತಾಲೂಕು ಸಂಘದ ಕಾರ್ಯದರ್ಶಿ ಸತೀಶ್ ಎಂ. ಪವಾರ್. ಅಣೋಜಿರಾವ್ ಇತರರಿದ್ದರು. ಹಿರಿಯ ಪತ್ರಕರ್ತ ಪಾಂಡೋಮಟ್ಟಿ ಶಿವಮೂರ್ತಿ ಅವರನ್ನು
ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.