Advertisement

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

03:29 AM Nov 27, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರ ಪತ್ರಿಕಾ ವಿತರಕರಿಗೆ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ನೆರವು ಯೋಜನೆ ಅಡಿಯಲ್ಲಿ ಇದುವರೆಗೂ ಇದ್ದಂತಹ ವಯೋಮಿತಿಯನ್ನು ಹೆಚ್ಚಿಸಿದೆ. 16ರಿಂದ 59 ವರ್ಷಗಳ ವರೆಗಿನ ಮಿತಿಯನ್ನು 70 ವರ್ಷಗಳಿಗೆ ಏರಿಸಲಾಗಿದೆ.

Advertisement

ಸರಕಾರದ ಈ ಕ್ರಮವನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಸ್ವಾಗತಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್‌, ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ ಹಾಗೂ ಸಹಾಯಕ ಆಯುಕ್ತರಾದ ಚಿದಾನಂದ್‌ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸರಕಾರ ಪ್ರಕಟಿಸಿರುವ ಈ ಸವಲತ್ತನ್ನು ಹಿರಿಯ ಪತ್ರಿಕಾ ವಿತರಕರು ಬಳಸಿಕೊಳ್ಳುವ ಮೂಲಕ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next