Advertisement

ಯಡಿಯೂರಪ್ಪ ಜನ್ಮ ದಿನದ ಪ್ರಯುಕ್ತ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

12:16 PM Feb 20, 2020 | keerthan |

ಶಿವಮೊಗ್ಗ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ‌78ನೇ ಜನ್ಮ ದಿನದ ಪ್ರಯುಕ್ತ ನಗರದ ವೀರಶೈವ  ಕಲ್ಯಾಣ ಮಂದಿರದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿದೆ ಸಂಸದ  ಬಿ.ವೈ.ರಾಘವೇಂದ್ರ ಹೇಳಿದರು.

Advertisement

ಫೆಬ್ರವರಿ 27 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಪ್ರೇರಣಾ ಎಜುಕೇಷನಲ್ ಮತ್ತು ಸೋಷಿಯಲ್ ಟ್ರಸ್ಟ್, ಸಹ್ಯಾದ್ರಿ ನಾರಾಯಣ ಹೃದಯಾಲಯದ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿದೆ ಎಂದರು.

ಕೇವಲ ಶಿವಮೊಗ್ಗ ಮಾತ್ರವಲ್ಲ ಬೇರೆ ಜಿಲ್ಲೆಯವರೂ ಈ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಬಹುದು ಎಂದ ಅವರು 300ಕ್ಕೂ ಹೆಚ್ಚು ಬಾಪೂಜಿ ಸೇವಾಕೇಂದ್ರ ಹಾಗೂ ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ಒಂದು ಲಕ್ಷ ಜನರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಗುವುದು. ಫೆಬ್ರವರಿ 27, 28, 29 ರಂದು ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಗುತ್ತದೆ ಎಂದರು.

ಸರ್ಕಾರಕ್ಕೆ ನೀಡಲಿರುವ ಶುಲ್ಕವನ್ನು ಪ್ರೇರಣಾ ಎಜುಕೇಷನ್ ಟ್ರಸ್ಟ್ ಭರಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನರಿಗೆ ಇದರಿಂದ ಅನುಕೂಲವಾಗಲಿದೆ. ಫೆಬ್ರವರಿ 24ರಂದು ಕಾರ್ಮಿಕ ಇಲಾಖೆಯಿಂದ ಉದ್ಯೋಗ ಮೇಳವನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಉದ್ಯೋಗ ಮೇಳ ಆರಂಭಗೊಳ್ಳಲಿದೆ. ನೂರಾರು ಕಂಪನಿಗಳು ಇದರಲ್ಲಿ ಭಾಗಿಯಾಗಲಿದೆ ಎಂದ ಅವರು ಬಿ ಎಸ್ ಯಡಿಯೂರಪ್ಪ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಭಾಗಿಯಾಗಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next