Advertisement

ಮುದ್ದೇನಹಳ್ಳಿಯಲ್ಲಿ ವೈದ್ಯಕೀಯ ಕಾಲೇಜು

04:41 PM Aug 28, 2021 | Team Udayavani |

ಚಿಕ್ಕಬಳ್ಳಾಪುರ: ಸತ್ಯ ಸಾಯಿ ಟ್ರಸ್ಟ್‌ ಮೂಲಕ ಮುದ್ದೇನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ವೈದ್ಯಕೀಯ ಕಾಲೇಜು ನಿರ್ಮಿಸಲು ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಭರವಸೆ ನೀಡಿದರು.

Advertisement

ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಸತ್ಯ ಸಾಯಿ ಸರಳಾ ಸ್ಮಾರಕ ಆಸ್ಪತ್ರೆಯನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿ ಪ್ರೇಮಾಮೃತಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿರುವ ಎಲ್ಲಾ ಬಡವರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಸತ್ಯಸಾಯಿ ಟ್ರಸ್ಟ್‌ನ ಮೂಲಕ ಮುದ್ದೇನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ವೈದ್ಯಕೀಯ ಕಾಲೇಜು ನಿರ್ಮಿಸಲು ಕನಸನ್ನು ಹೊಂದಿದ್ದು, ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ವಾಗ್ಧಾನ ಮಾಡಿದರು.

ಆದೇಶ ಪತ್ರ ಪಡೆದು ಸೇವೆಗೆ ಬಂದಿಲ್ಲ:
ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೇವೆ ಮಾಡುವ ವೈದ್ಯರಿಗೆ 1 ಲಕ್ಷ ರೂ.ನಿಂದ 2 ಲಕ್ಷ ರೂ.ವರೆಗೆ ವೇತನ ನೀಡುತ್ತೇವೆ. ಇತ್ತೀಚಿಗೆ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು 4 ಸಾವಿರ ವೈದ್ಯರ ನೇಮಕ ಮಾಡಿ, ಆದೇಶಪತ್ರ ನೀಡಲಾಗಿತ್ತು. ಆದರೆ, ಸೇವೆಗೆ ಹಾಜರಾಗಿದ್ದು ಕೇವಲ ಎರಡೂವರೆ ಸಾವಿರ ವೈದ್ಯರು ಮಾತ್ರ ಎಂದು ಹೇಳಿದರು.

ಆದರೆ, ಅಮೆರಿಕಾ, ಆಫ್ರಿಕಾ, ಯುರೋಪ್‌ ದೇಶಗಳಿಂದ ಸತ್ಯಸಾಯಿ ಭಕ್ತರು ಅಲ್ಲಿ ಇರುವಂತಹ ಅವಕಾಶಗಳು, ಉತ್ತಮ ಸ್ಥಾನ ಮಾನ ಬದಿಗೊತ್ತಿ ಇಲ್ಲಿ ಸೇವೆಮಾಡುತ್ತಿದ್ದಾರೆ.ಇದನ್ನುನೋಡಿದ್ರೆಯಾವುದೂ ಆಕರ್ಷಣೆ, ಯಾವುದು ಶಕ್ತಿ ಎಂದು ನಾವೆಲ್ಲರೂ ಚಿಂತನೆ ಮಾಡಬೇಕಿದೆ ಎಂದು ವಿವರಿಸಿದರು.

ಇದನ್ನೂ ಓದಿ:ದುಷ್ಕೃತ್ಯ ನಡೆಸುವವರಿಗೆ ಭಯ ಹುಟ್ಟುವ ಕಾನೂನು ತರುತ್ತೇವೆ: ಸಚಿವ ಈಶ್ವರಪ್ಪ

Advertisement

ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ: ಸರ್ಕಾರದಲ್ಲಿ ಕೆಲಸ ಮಾಡುವಾಗ ದೈವತ್ವ, ಗುರುವನ್ನು ನನ್ನ ಮನಸ್ಸಿನಲ್ಲಿಟ್ಟುಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಮಾಡುವ, ಕಷ್ಟದಲ್ಲಿರುವ ಮತ್ತು ನೋವಿನಲ್ಲಿರುವ ಜನರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಂಡು, ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಆಸ್ಪತ್ರೆಯ ವಿಸ್ತೃತ ವಿಭಾಗದ ಸತ್ಯ ಸಾಯಿ ರಾಜೇಶ್ವರಿ ಬ್ಲಾಕ್‌ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣಸಚಿವ ಡಾ.ಕೆ.ಸುಧಾಕರ್‌ ಭೂಮಿ ಪೂಜೆ ನೆರವೇರಿಸಿದರು. ಇತ್ತೀಚೆಗೆ ಸಂಸ್ಥೆಯ ಆಸ್ಪತ್ರೆಯಲ್ಲಿಬಾಲಹೃದಯಯಶಸ್ವಿ ಶಸ್ತ್ರಚಿಕಿತ್ಸೆ ಪಡೆದ ಮಕ್ಕಳಿಗೆ ಸದ್ಗುರುಗಳ ಸನ್ನಿಧಿಯಲ್ಲಿ ಸಿಎಂ ಬದುಕಿನ ಉಡುಗೊರೆ ನೀಡಿದರು.

ಸಂಸದ ಬಿ.ಎನ್‌.ಬಚ್ಚೇಗೌಡ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌, ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವ ವಿದ್ಯಾನಿಲಯದ ಕುಲಾಧಿಪತಿ ಬಿ.ಎನ್‌.ನರಸಿಂಹಮೂರ್ತಿ, ಸತ್ಯ ಸಾಯಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿ.ಶ್ರೀನಿವಾಸ್‌, ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ ಪಿ.ಶಿವಶಂಕರ್‌, ಉಪ ವಿಭಾಗಾಧಿಕಾರಿ ರಘು ನಂದನ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್‌ ಉಪಸ್ಥಿತರಿದ್ದರು.

ಸತ್ಯಸಾಯಿ ದರ್ಶನ ಮಾಡಿ
ಮಾಂಸಾಹಾರ ತ್ಯಜಿಸಿದೆ
ಸತ್ಯಸಾಯಿ ಬಾಬಾ ಅವರ ಸೇವಾ ಕಾರ್ಯಗಳಿಂದ ನಾನು ಪ್ರಭಾವಿತನಾಗಿದ್ದೇನೆ. 1998ರಲ್ಲಿ ವೈಟ್‌ ಫೀಲ್ಡ್‌ನಲ್ಲಿ ಅವರ ದರ್ಶನ ಪಡೆದು, ಸಸ್ಯಾಹಾರ ಮತ್ತು ಮಾಂಸಾಹಾರದ ಕುರಿತು ಪುಸ್ತಕವನ್ನು ಓದಿ ಮನಸ್ಸು ಪರಿವರ್ತನೆ ಮಾಡಿಕೊಂಡು, ಮಾಂಸಾಹಾರ ಸೇವಿಸುವುದನ್ನು ನಿಲ್ಲಿಸಿ, ಇದುವರೆಗೂ ಪಾಲಿಸಿಕೊಂಡು ಬರುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಾಲ್ಕೂವರೆ ಲಕ್ಷ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ
ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಸದ್ಗುರು ಮಧುಸೂದನ್‌ ಸಾಯಿ, ಮುದ್ದೇನಹಳ್ಳಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಿ ಬಡವರಿಗೆ ಅನುಕೂಲ ಕಲ್ಪಿಸಲಾಗುವುದು. ಸಂಭವನೀಯ ಕೊರೊನಾ ಸೋಂಕಿನ ಮೂರನೇ ಅಲೆ ತಡೆಗಟ್ಟಲು ಎಲ್ಲಾ ರೀತಿಯ ಸಹಕಾರ
ನೀಡುವುದಾಗಿ ಪ್ರಕಟಸಿದರು. ಸೆಪ್ಟೆಂಬರ್‌ ತಿಂಗಳಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಸಹಿತ ರಾಜ್ಯದ ನಾಲ್ಕೂವರೆ ಲಕ್ಷ ಮಕ್ಕಳಿಗೆ ಪೌಷ್ಟಿಕ ಆಹಾರ ವನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ 30 ದೇಶದಿಂದ ಭಕ್ತರು ಬಂದಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next