Advertisement

ವೈದ್ಯಕೀಯ ಕಾಲೇಜು ಹೆಚ್ಚಬೇಕಿದೆ: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್

01:29 AM Mar 07, 2022 | Team Udayavani |

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವೈದ್ಯಕೀಯ ಕಾಲೇಜುಗಳ ಹೆಚ್ಚಳಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡ ಬೇಕಾದ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಹೇಳಿದ್ದಾರೆ.

Advertisement

ವಸಂತ ನಗರದ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ನಲ್ಲಿ ಜರಗಿದ “ಆರೋಗ್ಯ ಉದ್ಯಮ ದಲ್ಲಿ ಹೊಸ ಯುಗದ ಕೌಶಲ ಅಭಿವೃದ್ಧಿ’ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮಲ್ಲಿ ಸೀಟು ಸಿಗದ ಕಾರಣ ವಿದ್ಯಾರ್ಥಿಗಳು ಓದಲು ವಿದೇಶಗಳಿಗೆ ಹೋಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರಕಾರ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next