Advertisement
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಎಲ್ಲಾ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನುರಿತ ಭದ್ರತಾ ಸಿಬ್ಬಂದಿ ನಿಯೋಜನೆ ಸೇರಿದಂತೆ ಬೀದಿ ದೀಪಗಳು, ಸಿಸಿ ಕ್ಯಾಮೆರಾಗಳ ಹೆಚ್ಚಳ ಮುಂತಾದ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ವೈದ್ಯ ಸಿಬ್ಬಂದಿಯ ವಸತಿ ನಿಲಯಗಳ ಸುರಕ್ಷತೆಗೂ ಆದ್ಯತೆ ನೀಡುತ್ತಿದ್ದೇವೆ. ಈ ಕ್ರಮಗಳು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿರಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ವೈದ್ಯ ವಿದ್ಯಾರ್ಥಿಗಳು ತಡರಾತ್ರಿಯಲ್ಲಿ ಬರುವ ತುರ್ತು ಕರ್ತವ್ಯದ ಅವಧಿಯಲ್ಲಿ ವಸತಿ ನಿಲಯದಿಂದ ಆಸ್ಪತ್ರೆಗೆ ಕರೆದ್ಯೊಯಲು ವಾಹನ ವ್ಯವಸ್ಥೆ ಹಾಗೂ ಅದರಲ್ಲಿ ಭದ್ರತೆ ವ್ಯವಸ್ಥೆ ಕಲ್ಪಿಸುವುದು, ಕರ್ತವ್ಯ ನಿರ್ವಹಿಸುವ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯಾಧಿಕಾರಿಗಳಿಗೆ ವಿಶ್ರಾಂತಿ ಕೊಠಡಿ ಕೊರತೆ, ಸಿಸಿ ಕ್ಯಾಮರ ಆಳವಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪಿಜಿ ವೈದ್ಯ ವಿದ್ಯಾರ್ಥಿಗಳು ಸಚಿವರಿಗೆ ಸಲ್ಲಿಸಿದ್ದಾರೆ.