Advertisement

ಮೆಡಿಕಲ್‌ ಸರ್ವೀಸ್‌ ಸೆಂಟರ್‌ ಪದಾಧಿಕಾರಿಗಳ ಪ್ರತಿಭಟನೆ

09:53 AM Jun 05, 2021 | Team Udayavani |

ದಾವಣಗೆರೆ: ಕೋವಿಡ್ ವಾರಿಯರ್ಸ್ ಗಳ ಮೇಲಿನ ಹಲ್ಲೆ, ಆಧುನಿಕ ವೈದ್ಯಕೀಯ ಪದ್ಧತಿ ವಿರುದ್ಧ ಬಾಬಾ ರಾಮದೇವ್‌ ನೀಡಿರುವ ಹೇಳಿಕೆ ಖಂಡಿಸಿ ಶುಕ್ರವಾರ ಮೆಡಿಕಲ್‌ ಸರ್ವೀಸ್‌ ಸೆಂಟರ್‌ ಮುಖಂಡರು, ಪದಾಧಿಕಾರಿಗಳು ಆನ್‌ಲೈನ್‌ ಪ್ರತಿಭಟನೆ ನಡೆಸಿದರು.

Advertisement

ಇತ್ತಿಚಿನ ವರ್ಷಗಳಲ್ಲಿ, ಅವೈಜ್ಞಾನಿಕ ವೈದ್ಯಕೀಯ ಚಿಕಿತ್ಸೆ ಮತ್ತು ಚಿಂತನೆಗಳಿಗೆ ಕುಮ್ಮಕ್ಕು ನೀಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಕೋವಿಡ್‌ ಮಹಾಮಾರಿಯ ವಿರುದ್ಧದ ಹೋರಾಟದ ಹಗಲು ರಾತ್ರಿಯನ್ನದೆ ಅವಿಶ್ರಾಂತವಾಗಿ ಕೆಲಸ ಮಾಡುತ್ತಿರುವ ಆಧುನಿಕ ವೈದ್ಯಕೀಯ ಸಿಬ್ಬಂದಿ ಮತ್ತು ಚಿಕಿತ್ಸಾ ವಿಧಾನದ ಬಗ್ಗೆ ಬಾಬಾ ರಾಮದೇವ್‌ ಅವರು ಅವಹೇಳನಕಾರಿ ಹೇಳಿಕೆ ನೀಡುವ ಜೊತೆಗೆ ದುರುದ್ದೇಶಪೂರಿತ ಅಭಿಯಾನ ನಡೆಸುತ್ತಿರುವುದು ಖಂಡನೀಯ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈಚೆಗೆ ಹಲವು ಕಡೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಲ್ಲೆ ಹೆಚ್ಚುತ್ತಿವೆ. ವೈದ್ಯಕೀಯ ಸಿಬ್ಬಂದಿ, ಕೋವಿಡ್‌ ವಾರಿಯರ್ಸ್‌ ಮೇಲಿನ ಹಲ್ಲೆಯನ್ನು ನಿಲ್ಲಿಸಿ, ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು. ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಎಲ್ಲರಿಗೂ ಉಚಿತ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಖಾತ್ರಿಪಡಿಸಬೇಕು. ಸಾರ್ವತ್ರಿಕ, ಉಚಿತ ಲಸಿಕಾ ಅಭಿಯಾನ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next