Advertisement

ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

10:28 AM Oct 28, 2021 | Team Udayavani |

ಶ್ರೀನಗರ: ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಜಯಗಳಿಸಿದ ನಂತರ ತನ್ನ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದನ್ನು ವಿರೋಧಿಸಿದ್ದಕ್ಕಾಗಿ ತನಗೆ ಜೀವ ಬೆದರಿಕೆ ಬಂದಿದೆ ಎಂದು ಶ್ರೀನಗರದ ವೈದ್ಯಕೀಯ ವಿದ್ಯಾರ್ಥಿನಿ ಹೇಳಿಕೊಂಡಿದ್ದಾರೆ.

Advertisement

ಪಾಕ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸ್ಕಿಮ್ಸ್ ನ ಕೆಲವು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಬ್ದುಲ್ಲಾ ಘಜಿ ಎಂಬ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಇದಕ್ಕೆಲ್ಲಾ ಕಾರಣ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಜಮ್ವಾಲ್ ಎಂದು ಆರೋಪಿಸಲಾಗಿದ್ದು, ಆಕೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ ಎನ್ನಲಾಗಿದೆ. ಇದಾದ ಬಳಿಕ ಘಟನೆ ಬೇರೆ ಸ್ವರೂಪ ಪಡೆದಿದೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಇತರರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುವ ಮತ್ತು ಪಾಕಿಸ್ತಾನದ ವಿಜಯವನ್ನು ಆಚರಿಸುತ್ತಿರುವ ಹಲವಾರು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಅನನ್ಯಾ ವಿರುದ್ಧ ಅಬ್ದುಲ್ಲಾ ಘಾಜಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಸ್ಕಿಮ್ಸ್ ಎಫ್‌ಐಆರ್ ಮತ್ತು ಯುಎಪಿಎ ಕಾಯ್ದೆ ಹಿಂದೆ ಪೊಲೀಸ್ ಮಾಹಿತಿದಾರ ಮತ್ತು ಘಟನೆಯ ‘ಪ್ರಮುಖ ಆರೋಪಿ’ಯಯಾಗಿರುವ ಆರ್‌ಎಸ್‌ಎಸ್ ಕಾರ್ಯಕರ್ತೆ ಅನನ್ಯಾ ಜಮ್ವಾಲ್ ಇದ್ದಾರೆ. ಡೋಗ್ರಾ ನಿವಾಸಿಯಾಗಿರುವ ಅನನ್ಯಾ ಪ್ರಸ್ತುತ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಓದುತ್ತಿದ್ದಾರೆ. ಸಂಘ ಮತ್ತು ಇತರ ಆರ್‌ಎಸ್‌ಎಸ್ ಕಾರ್ಯಕರ್ತರೊಂದಿಗೆ ಸೇರಿ ಸ್ಥಳೀಯ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವ ಮೂಲಕ ಬೃಹತ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ಘಾಜಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

Advertisement

ಆದರೆ ಅನನ್ಯಾ ಜಮ್ವಾಲ್ ಈ ಆರೋಪಗಳನ್ನು ನಿರಾಕರಿಸಿದ್ದಾರೆ. “ದೇಶದ್ರೋಹಿಗಳನ್ನು ಬೆಂಬಲಿಸುವವರನ್ನು ಮಾತ್ರ ನಾನು ಎದುರು ಹಾಕಿಕೊಂಡಿದ್ದೇನೆ ” ಎಂದು ಹೇಳಿದ್ದಾರೆ. ತನಗೆ ಬೇರೆ ಬೇರೆ ರೀತಿಯಲ್ಲಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ ಎಂದು ಅನನ್ಯಾ ಜಮ್ವಾಲ್ ಟ್ವೀಟ್ ಮಾಡಿದ್ದಾರೆ.

ತಾನು ಆ ವೀಡಿಯೊಗಳನ್ನು ಸೋರಿಕೆ ಮಾಡಿಲ್ಲ, ಅಥವಾ ಪೊಲೀಸ್ ಮಾಹಿತಿದಾರರೂ ಅಲ್ಲ. ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ತನ್ನ ಬಗ್ಗೆ ನಕಲಿ ಮಾಹಿತಿಯನ್ನು ಹರಡದಂತೆ ಅನನ್ಯಾ ವಿನಂತಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದ ಕರಣ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸ್ಕಿಮ್ಸ್ ಸೌರಾದಲ್ಲಿ ಹಾಸ್ಟೆಲ್‌ಗಳಲ್ಲಿ ವಾಸಿಸುವ ಕೆಲವು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಸಾಂಬಾ ಜಿಲ್ಲೆಯಲ್ಲೂ ಆರು ಮಂದಿಯನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next