Advertisement
ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನೂರು ದಿನಗಳ ಸಾಧನೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ಹೆಚ್ಚಳ ಮಾಡಬೇಕು ಎಂದು ವಿದ್ಯಾರ್ಥಿಯೊಬ್ಬರು ಸಲಹೆ ನೀಡಿದ್ದಾರೆ. ತತ್‌ಕ್ಷಣವೇ ಸಾಧ್ಯವಿಲ್ಲ. ಆದರೆ, ಮುಂದಿನ ಬಜೆಟ್‌ನಲ್ಲಿ ಈ ಸಂಬಂಧ ಅಗತ್ಯ ಘೋಷಣೆ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.
Related Articles
Advertisement
ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಶಿಲಾನ್ಯಾಸ ಪೂರ್ಣಗೊಂಡಿದ್ದು, ಚಿಕ್ಕಮಗಳೂರು, ಯಾದಗಿರಿ ಹಾಗೂ ಹಾವೇರಿ ಜಿÇÉೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆಯಲಾಗಿದೆ.
ಹೊಸದಾಗಿ ಡೀಪ್ ಜಿನೋಮಿಕ್ಸ್ ಸೆಂಟರ್ ಫಾರ್ ಎಕ್ಸಲೆನ್ಸಿಯನ್ನು ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 450 ಹಾಸಿಗೆಯ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಮಂಡಳಿ 100 ಕೋಟಿ ರೂ.ನಷ್ಟು ಆಡಳಿತಾತ್ಮಕ ಅನುಮೋದನೆ ನೀಡಿದೆ. ಕಾರವಾರದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಪನ್ಯಾಸಗಳ ವೀಡಿಯೋಗಳು ಹಾಗೂ ಪಠ್ಯಕ್ರಮಗಳಿಗೆ ಪ್ರತ್ಯೇಕ ಡಿಜಿಟಲ್ ವೇದಿಕೆ ಕಲ್ಪಿಸಲಾಗುವುದು. ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆಗಾಗಿ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಜ್ಯ ಆಯೋಗ ಸ್ಥಾಪಿಸಲಿದ್ದೇವೆ ಎಂದು ವಿವರಿಸಿದರು.
ಇಲಾಖೆಯ ನೂರು ದಿನಗಳ ಸಾಧನೆಯ ಕಿರುಹೊತ್ತಿಗೆ ಬಿಡುಗಡೆಗೊಳಿಸಲಾಯಿತು. ನಾರಾಯಣ ಹೃದಯಾಲಯ ಮುಖ್ಯಸ್ಥ ಡಾ.ದೇವಿಪ್ರಸಾದ್ ಶೆಟ್ಟಿ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಸಚ್ಚಿದಾನಂದ, ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ ರಂಗನಾಥ್, ಇಲಾಖೆಯ ಅಧಿಕಾರಿಗಳಾದ ರಾಜ್‌ಕುಮಾರ್ ಕತ್ರಿ, ಜಾವೇದ್ ಅಖ್ತರ್, ಬೆಂಗಳೂರು ಕೇಂದ್ರ ವಿವಿ ಕುಲಪತಿ ಪ್ರೊ.ಜಾಫೆಟ್ ಉಪಸ್ಥಿತರಿದ್ದರು.