Advertisement

ರೋಗ ತಡೆಗೆ ಮುಂಜಾಗ್ರತೆಯೇ ಮದ್ದು

10:15 AM Aug 03, 2020 | Suhan S |

ಶ್ರೀರಂಗಪಟ್ಟಣ: ಕೆಲವು ರೋಗಗಳಿಗೆ ಔಷಧಿ ಇಲ್ಲವಾಗಿದೆ. ಆದ್ದರಿಂದ ರೋಗ ನಿಯಂತ್ರಣಕ್ಕೆ ಮುಂಜಾಗ್ರತೆಯೇ ಮದ್ದು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ.ಬೆನ್ನೂರ ಹೇಳಿದರು.

Advertisement

ಪಟ್ಟಣದ ಸಂತೆಮಾಳದ ಅಂಗನವಾಡಿ ಕೇಂದ್ರ ದಲ್ಲಿ ಆರೋಗ್ಯ ಇಲಾಖೆಯಿಂದ ನಡೆದ ಡೆಂಗ್ಯೂ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸದ್ಯ ಮಳೆಗಾಲ ಆರಂಭವಾಗಿದೆ. ತಮ್ಮ ಮನೆ ಸುತ್ತಮುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಂಡು ರೋಗ ಬರದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ರೋಗಗಳ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜಾಗೃತಿ ಮೂಡಿಸುವ ಕೆಲಸಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಬಿ.ಮಂಗಳಾ, ಅಂಗನವಾಡಿ ಕಾರ್ಯಕರ್ತೆ ವೇದಾವತಿ, ಆಶಾ ಕಾರ್ಯಕರ್ತೆ ಮೀನಾ, ಸಾಕಮ್ಮ, ಪಾರ್ವತಮ್ಮ, ಲಕ್ಷ್ಮಮ್ಮ, ಜಯಲಕ್ಷ್ಮೀ, ಅಶ್ವಿ‌ನಿ, ಪದ್ಮಾ, ಕಿರಿಯ ಆರೋಗ್ಯ ಸಹಾಯಕ ಚಂದನ ಹಾಜರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next