Advertisement
ತಾಲೂಕಿನ ಬೀರಸಂದ್ರ ಗ್ರಾಮದ ಬೆಂ. ಗ್ರಾ. ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಕಚೇರಿ ಸಭಾಂಗಣದಲ್ಲಿ ಜಿÇÉಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಿವ್ಯಾಂಗರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಬಿಪಿ, ಶುಗರ್‌ನಂತಹ ಕಾಯಿಲೆಗಳನ್ನು ಗುಣಪಡಿಸುವ ಮಾತ್ರೆಗಳನ್ನು ಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಉಚಿತವಾಗಿ ಮನೆಗೆ ತಲುಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
Related Articles
Advertisement
ಹಿರಿಯರಿಗೆ ಆಸರೆಯಾಗಿ: ಜಿಪಂ ಸಿಇಒಎಂ.ಆರ್.ರವಿಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರಿನ್ನು ವೃದ್ಧಾಶ್ರಮಗಳಿಗೆ ಬಿಡುವ ಪದ್ಧತಿ ಹೆಚ್ಚುತ್ತಿರುವುದು ಅತ್ಯಂತ ಕಳವಳಕಾರಿ ಯಾದ ಸಂಗತಿಯಾಗಿದ್ದು, ಮಕ್ಕಳು ತಮ್ಮ ಪೋಷಕರಿಗೆ ಉತ್ತಮ ಸೌಲಭ್ಯ ಒದಗಿಸಿ ಆರೈಕೆ ಮಾಡಬೇಕು.
ಯುವಕರು ನಗರ ಜೀವನಕ್ಕೆ ಮಾರುಹೋಗಿ ತಮ್ಮ ಸಂಬಂಧಗಳನ್ನು ಕಡಿದುಕೊಳ್ಳುತ್ತಿದ್ದಾರೆ. ವಿಭಕ್ತ ಕುಟುಂಬದಿಂದ ಹಿರಿಯ ನಾಗರಿಕರು ಹೆಚ್ಚು ಸಮಸ್ಯೆ ಅನುಭವಿಸುತ್ತಿರುವುದರಿಂದ ಅವಿಭಕ್ತ ಕುಟುಂಬಗಳು ಹೆಚ್ಚಾಗಬೇಕು. ಮಕ್ಕಳು ಹಿರಿಯರಿಗೆ ಹೆಚ್ಚಿನ ಪ್ರೀತಿ ಮತ್ತು ಗೌರವ ನೀಡುವ ಮೂಲಕ ಆಸರೆಯಾಗಿ ರಬೇಕು ಎಂದರು.
ನಾಗರಿಕರಿಗೆ ಬಹುಮಾನ ವಿತರಣೆ: ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಅಪರ ಜಿಲ್ಲಾಧಿಕಾರಿ ವಿಜಯಾ. ಈ. ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನಿತಾಲಕ್ಷಿ ಜಿಲ್ಲಾ ದಿವ್ಯಾಂಗ ಕಲ್ಯಾಣಾಧಿಕಾರಿ ಜಗದೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಶ್ರೀವಾಣಿ ಕೋನಾರೆಡ್ಡಿ ಸೇರಿದಂತೆ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಇದ್ದರು.
ಕುಂದುಕೊರತೆ ಆಲಿಸಿ ಪರಿಹಾರ ನೀಡಿ-
ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಬ್ಯಾಂಕ್‌ಗಳಲ್ಲಿ ಪ್ರತ್ಯೇಕ ಸಾಲು ಮೀಸಲಿಡುವಂತೆ ಹಾಗೂ ಹಿರಿಯರಿಗೆ ಪ್ರಥಮ ಆದ್ಯತೆ ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಗುವುದು. ಜಿಲ್ಲಾಮಟ್ಟದಲ್ಲಿರುವ ಹಿರಿಯ ನಾಗರಿಕರ ಸಹಾಯವಾಣಿಯಂತೆ ತಾಲೂಕುಮಟ್ಟದಲ್ಲಿಯೂ ಸಹಾಯವಾಣಿ ಸ್ಥಾಪಿಸಿ, ಅವರ ಕುಂದುಕೊರತೆಗಳನ್ನು ಆಲಿಸಬೇಕು ಹಾಗೂ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.