ಸಾಮಾನ್ಯವಾಗಿ ಹೂವುಗಳನ್ನು ಪೂಜೆಗೆ ಮಾತ್ರ ಬಳಸಲಾಗುತ್ತದೆ. ಅದರಲ್ಲೂ ಎಲ್ಲೆಂದರಲ್ಲಿ ಬೆಳೆಸಲಾಗುವ ದಾಸವಾಳ ಹೂವು ದೇವರ ನಿತ್ಯ ಪೂಜೆಗೆ ಬಳಕೆಯಾಗುತ್ತದೆ. ಆದರೆ ಈ ಹೂವಿನಲ್ಲಿ ಔಷಧೀಯ ಗುಣಗಳಿವೆ ಎಂಬುದು ಹಲವರಿಗೆ ಗೊತ್ತಿರಲ್ಲಿಕ್ಕಿಲ್ಲ.
ಹೂವು ಅನೇಕ ಆರೊಗ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ. ಕೂದಲು, ಹೊಟ್ಟೆ, ಕೊಲೆಸ್ಟ್ರಾಲ್, ಕ್ಯಾನ್ಸರ್, ಹೃದಯ, ರಕ್ತನಾಳದ ಕಾಯಿಲೆ ಸೇರಿದಂತೆ ಸ್ತ್ರೀಯರ ಅನೇಕ ಸಮಸ್ಯೆಗಳು ಹೂವಿನಿಂದ ಪರಿಹಾರವಾಗುತ್ತದೆ. ಇಂತಹ ಕೆಲವು ಸಮಸ್ಯೆ-ಪರಿಹಾರಗಳ ಬಗ್ಗೆ ತಿಳಿದುಕೊಳ್ಳೋಣ.
ಮಧುಮೇಹ ನಿವಾರಣೆಗೆ:
ಮಧುಮೇಹ ಸಮಸ್ಯೆ ಇರುವವರು ನಿಯಮಿತವಾಗಿ ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Related Articles
ರಕ್ತದೊತ್ತಡವನ್ನು ನಿವಾರಣೆ:
ರಕ್ತದೊತ್ತಡ ಸಾಮಾನ್ಯ ಕಾಯಿಲೆಯಾಗಿದ್ದರು ಕೂಡ ಇದು ಅಪಾಯಕಾರಿ. ಈ ಹೂವಿನ ರಸದ ಕಷಾಯವನ್ನು ಕುಡಿದರೆ ದೇಹದಲ್ಲಿನ ಅತಿಯಾದ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರುತ್ತದೆ. ದಾಸವಾಳದ ಹೂವಿನ ಟೀ ಮಾಡಿ ಕುಡಿದರೆ ಅಥವಾ ಅದರ ರಸವನ್ನು ಸೇವಿಸಿದರೆ, ಹೃದಯ ಸ್ತಂಭನಕ್ಕೆ ಕಾರಣವಾಗುವ, ರಕ್ತದಲ್ಲಿ ಸೇರಿಕೊಂಡ ಅನಗತ್ಯ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಈ ಮೂಲಕ ಹೃದಯ ಸ್ತಂಭನದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
ತೂಕ ಇಳಿಕೆ:
ದೇಹದಲ್ಲಿರುವ ಅನಗತ್ಯ ಬೊಜ್ಜನ್ನು ಕರಗಿಸುವಲ್ಲಿ ದಾಸವಾಳ ಹೆಚ್ಚು ಪ್ರಯೋಜನ. ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ದಾಸವಾಳದಲ್ಲಿನ ಸಾರಗಳು ಕೊಬ್ಬಿನ ಕೋಶಗಳನ್ನು ಸಂಗ್ರಹಿಸುವುದನ್ನು ತಡೆಯಲು ಸಹಾಯ ಮಾಡುತ್ತದೆ. ದಾಸವಾಳ ಆ್ಯಂಟಿಆಕ್ಸಿಡೆಂಟ್ ಅಂಶವಿದ್ದು, ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.
ಕ್ಯಾನ್ಸರ್:
ದಾಸವಾಳ ಹೂವಿನಲ್ಲಿರುವ ಗುಣ ಕ್ಯಾನ್ಸರ್ ಕಣಗಳ ವಿರುದ್ಧ ಹೋರಾಡುತ್ತದೆ. ದಾಸವಾಳ ಹೂವಿನ ಟೀ ಮಾಡಿ ಕುಡಿಯುವುದು ತುಂಬಾ ಒಳ್ಳೆಯದು. ಬಿಳಿ ದಾಸವಾಳ ಎಲ್ಲಕ್ಕಿಂತ ಹೆಚ್ಚು ಔಷಧೀಯ ಗುಣಗಳನ್ನು ಹೊಂದಿದೆ. ಹೂವುಗಳನ್ನು ಬೇವಿನ ಮರದ ಅಡಿ (ನೆರಳಿನಲ್ಲಿ) ಒಣಗಿಸುವುದು ಉತ್ತಮ. ನಂತರ ಇದನ್ನು ಪುಡಿ ಮಾಡಿ ಸೇವಿಸಿದರೆ ಎಲ್ಲ ಬಗೆಯ ಕ್ಯಾನ್ಸರ್‌ಗಳಿಗೆ ಉಪಶಮನಕಾರಿ.
ತಲೆ ಕೂದಲಿನ ಸಮಸ್ಯೆ:
ಈ ಹೂವಿನ ದಳಗಳನ್ನು ಅರೆದು ಅದರಲ್ಲಿ ಸಂಗ್ರಹಿಸಲಾದ ಲೋಳೆಯನ್ನು ಕೂದಲ ಬುಡಕ್ಕೆ ಹಚ್ಚುವುದು ಕೂದಲ ಪೋಷಣೆಗೆ ಒಂದು ಉತ್ತಮ ವಿಧಾನ. ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ, ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಪ್ರತೀದಿನ ಕೂದಲಿಗೆ ಈ ಎಣ್ಣೆ ಹಚ್ಚಿದರೆ ಕೂದಲು ಕಪ್ಪು ಬಣ್ಣ ಪಡೆಯುತ್ತದೆ.
ಹಲವು ನೈಸರ್ಗಿಕ ಕೂದಲ ಉತ್ಪನ್ನಗಳಲ್ಲಿ ಇದನ್ನು ಬಳಸಲಾಗುತ್ತದೆ. ಇದರ ಗಿಡದ ಚೆಕ್ಕೆ ಪುಡಿಯನ್ನು ಶಾಂಪೂ ಮೂಲಕ ಬಳಸುವುದು ತಲೆಯ ಚರ್ಮ ಒಣಗುವುದಕ್ಕೆ ಹಾಗೂ ತಲೆಯಲ್ಲಿ ಹೊಟ್ಟಾಗುವುದರಿಂದ ರಕ್ಷಿಸಬಹುದು.
ಚರ್ಮದ ಆರೈಕೆಗೆ:
ದಾಸವಾಳ ಹೂವಿನ ತೈಲದ ಬಳಕೆಯಿಂದ ಚರ್ಮಕ್ಕೆ ಹೊಳಪು ಬರುತ್ತದೆ. ಹೂವು ಹಾಗೂ ಎಲೆಗಳನ್ನು ಒಣಗಿಸಿ, ಸುಟ್ಟ ಬಳಿಕ ಸಿಗುವ ಬೂದಿಯನ್ನು ಹಚ್ಚಿದರೆ, ಕಣ್ಣಹುಬ್ಬುಗಳು ಹೊಳಪು ಪಡೆಯುತ್ತವೆ. ಈ ಸಸ್ಯದ ಬೇರುಗಳನ್ನು ಎಣ್ಣೆಯಲ್ಲಿ ಹಾಕಿ, ಬೇರಿನಲ್ಲಿರುವ ನೀರಿನ ಅಂಶ ಆವಿಯಾಗುವವರೆಗೂ ಕುದಿಸಬೇಕು. ಗಾಯಗಳಿಗೆ ಈ ಎಣ್ಣೆ ಲೇಪಿಸಿದರೆ ಗುಣಮುಖವಾಗುವುದು.
ಕಾವ್ಯಶ್ರೀ