Advertisement

ಆನ್‌ಲೈನ್‌ನಲ್ಲಿ ಧ್ಯಾನ ಶಿಬಿರ

09:24 AM May 29, 2020 | Suhan S |

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಹಜ ಯೋಗ ಸಂಸ್ಥೆಯ ಧ್ಯಾನ ಕಾರ್ಯಕ್ರಮ ಮೇ 31ರಂದು ಆನ್‌ಲೈನ್‌ ಮೂಲಕ ನಡೆಯಲಿದೆ ಎಂದು ಜಿಲ್ಲಾ ಸಂಚಾಲಕ ರವಿ ನಾಯಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement

ಅಂದು ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ವೀಕ್ಷಣೆಗೆ ಯಾವುದೇ ಶುಲ್ಕವಿರುವುದಿಲ್ಲ. ಕಾರ್ಯಕ್ರಮವನ್ನು ಹಿಂದೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತಿತ್ತು. ಆದರೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಸೇರಬಾರದು ಎನ್ನುವ ಕಾರಣಕ್ಕೆ ಆನ್‌ಲೈನ್‌ ಮೂಲಕ ನಡೆಸಲು ನಿರ್ಧರಿಸಲಾಗಿದ್ದು, syonline.in ಮೂಲಕ ನೇರವಾಗಿ ವೀಕ್ಷಣೆ ಮಾಡಬಹುದಾಗಿದೆ ಎಂದರು.

ಶ್ರೀ ಮಾತಾಜಿ ನಿರ್ಮಲಾ ದೇವಿ ಸ್ಥಾಪಿಸಿರುವ ಸಹಜ ಯೋಗ ಸಂಸ್ಥೆಯಿಂದ ಲಾಕ್‌ಡೌನ್‌ ಸಂದರ್ಭದಲ್ಲಿ ಜನರ ಮಾನಸಿಕ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಆನ್‌ಲೈನ್‌ ಮೂಲಕ ಧ್ಯಾನ ಹಾಗೂ ಸೂಕ್ತ ಸಲಹೆಗಳನ್ನು ನೀಡುವ ಕಾರ್ಯ ಮಾಡಲಾಗಿದೆ. ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಈ ಸೇವೆ ಉಚಿತವಾಗಿ ನಡೆಯುತ್ತಿದ್ದು, 36 ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಮೇ 31ರಂದು ನಡೆಯುವ ಕಾರ್ಯಕ್ರಮ ಕನ್ನಡದಲ್ಲಿ ನಡೆಯಲಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಂಚಾಕ್ಷರಿ ಮಠದ, ರಾಜು ಮಂಗಳವಾಡಿ, ಚಂದ್ರಶೇಖರ ತಡಸ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next