Advertisement

ಮಧ್ಯಮ, ದೀರ್ಘಾವಧಿ ಸಾಲ ಪಡೆದ ರೈತರು ಅಸಲು ಕಟ್ಟಿದರೆ ಬಡ್ಡಿ ಮನ್ನಾ

11:15 AM Feb 19, 2020 | sudhir |

ಕೊಪ್ಪಳ: ಸಹಕಾರಿ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಪಿಎಲ್‌ಡಿ, ಡಿಸಿಸಿ, ಲ್ಯಾಂಪ್ಸ್‌ ಬ್ಯಾಂಕ್‌ಗಳಲ್ಲಿ ಮಧ್ಯಮ ಹಾಗೂ ದೀರ್ಘಾವಧಿ ಸಾಲ ಪಡೆದ ರೈತರು ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವ ಕುರಿತು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.

Advertisement

ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಸಹಕಾರಿ ಬ್ಯಾಂಕ್‌ಗಳಲ್ಲಿ ಅಲ್ಪಾವಧಿ ಸಾಲ ಪಡೆದ ರೈತರ ಸಾಲ ಮನ್ನಾ ಮಾಡಿತ್ತು. ಬಳಿಕ ಅಧಿಕಾರಕ್ಕೇರಿದ ಮೈತ್ರಿ ಸರ್ಕಾರವೂ ರೈತರು ವಾಣಿಜ್ಯ ಬ್ಯಾಂಕ್‌ಗಳಲ್ಲಿ ಮಾಡಿದ ಬೆಳೆ ಸಾಲವನ್ನು 2 ಲಕ್ಷದವರೆಗೂ ಮನ್ನಾ ಮಾಡಿದ್ದಲ್ಲದೇ, ಸಹಕಾರಿ ಬ್ಯಾಂಕ್‌ನಲ್ಲಿನ ಅಲ್ಪಾವಧಿ ಸಾಲ ಮನ್ನಾ ಮಾಡಿ ಬರದ ಪರಿಸ್ಥಿತಿಯಲ್ಲಿ ರೈತರ ನೆರವಿಗೆ ಧಾವಿಸಿತ್ತು. ಆದರೆ ಸಹಕಾರ ಇಲಾಖೆಯಡಿ ಕಾರ್ಯ ನಿರ್ವಹಿಸುವ ಜಿಲ್ಲಾ ಸಹಕಾರ ಬ್ಯಾಂಕ್‌ ಹಾಗೂ ಪಿಎಲ್‌ಡಿ, ಲ್ಯಾಂಪ್ಸ್‌ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಮಧ್ಯಮ-ದೀರ್ಘಾವಧಿ ಸಾಲ ಮನ್ನಾ ಮಾಡಿರಲಿಲ್ಲ.

ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ, ಆರಂಭಿಕ ಹಂತದಲ್ಲಿ ರೈತರ ಸಾಲವನ್ನು ಸಕಾಲಕ್ಕೆ ಪೊಲೀಸ್‌ ಭದ್ರತೆಯಲ್ಲಿ ಸಾಲ ವಸೂಲಿ ಮಾಡಬೇಕು. ಇಲ್ಲವೇ ಅವರ ಆಸ್ತಿ ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಬಳಿಕ, ತನ್ನ ಆದೇಶ ವಾಪಾಸ್‌ ಪಡೆಯಿತು. ಈಗ ಮತ್ತೆ ಆದೇಶ ಮಾಡಿ ಮಧ್ಯಮ-ದೀರ್ಘಾವಧಿ ಸಾಲ ಪಡೆದ ಸುಸ್ತಿದಾರರು ನಿಗದಿತ ಕಾಲಮಿತಿಯಲ್ಲಿ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವುದಾಗಿ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next