ಬೆಂಗಳೂರು: ಕೆಲ ವರ್ಷಗಳ ಹಿಂದೆ ಸ್ಯಾಂಡಲ್ವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ‘ಮೀಟೂ’ ಪ್ರಕರಣಕ್ಕೆ ಸಂಬಂಧಿಸಿ ನಟಿ ಶ್ರುತಿ ಹರಿಹರನ್ ಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
2018ರಲ್ಲಿ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಈ ಹಿಂದೆ ಮೀಟೂ ಆರೋಪ ಮಾಡಿದ್ದರು. ಈ ಸಂಬಂಧ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ 354,354a ಮತ್ತು 506 ಐಪಿಸಿ ಅಡಿ ಕೇಸ್ ದಾಖಲು ಆಗಿತ್ತು.
ಇದನ್ನೂ ಓದಿ:ಚೊಚ್ಚಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಶ್ರೇಯಸ್ ಅಯ್ಯರ್
ಇದೀಗ ಪೊಲೀಸರು ನಟಿ ಶ್ರುತಿ ಹರಿಹರನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಮೂರು ದಿನಗಳ ಒಳಗಾಗಿ ತನಿಖಾಧಿಕಾರಿಗಳು ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ತನಿಖೆ ವೇಳೆ ಯಾವೂದೇ ಸಾಕ್ಷ ಸಿಗದ ಹಿನ್ನೆಲೆ ಪೊಲೀಸರು ನ್ಯಾಯಾಲಯಕ್ಕೆ ‘ಬಿ’ರಿಪೋರ್ಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ.