ಮುಂಬಯಿ: ಇಂದು ಶಿಕ್ಷಣವೇ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಮೂಲ ಮಂತ್ರವಾಗಿದ್ದು, ಮಕ್ಕಳನ್ನು ಸುಸಂಸ್ಕೃತರನ್ನಾಗಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಂಟರ ಸಂಘ ಕಾರ್ಯ ಅಭಿನಂದನೀಯವಾಗಿದೆ. ದೇಶದ ಮತ್ತು ರಾಜ್ಯದ ಶಿಕ್ಷಣದ ಸೌಲಭ್ಯಗಳು ಸಮಗ್ರವಾಗಿ ಪ್ರತಿಯೋರ್ವನಿಗೂ ನೀಡುವುದಕ್ಕೆ ಅಪಾರ ಸಮಸ್ಯೆಗಳಾಗುತ್ತದೆ. ಆದರೆ ಬಂಟರ ಸಮಾಜ ಬಾಂಧವರಿಗೆ ನಿರಂತರವಾಗಿ ಶಿಕ್ಷಣದ ನೆರವನ್ನು ನೀಡುತ್ತಿರುವ ಮುಂಬಯಿ ಬಂಟರ ಸಂಘದ ಸೇವಾ ಕಾರ್ಯ ಪ್ರಶಂಸನೀಯ. ಬಂಟರ ಸಂಘ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರವಾದ ಸೇವೆಯನ್ನು ಮಹಾರಾಷ್ಟ್ರದಲ್ಲಿ ಮಾಡಿದೆ. ಇಂದಿನ ದಿನಗಳಲ್ಲಿ ಓರ್ವ ವಿದ್ಯಾರ್ಥಿಗೆ ಶಿಕ್ಷಣ ನೀಡುವುದು ಕಷ್ಟಕರವಾಗಿರುವ ಸಂದರ್ಭದಲ್ಲಿ ಬಂಟ ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಬಂಟರ ಸಂಘವು ಹಲವಾರು ಯೋಜನೆಗಳನ್ನು ತಂದಿದ್ದು ಇದರರಿಗೆ ಮಾದರಿಯಾಗಿದೆ. ಸಂಘದ ಈ ಶಿಕ್ಷಣ ಸೇವೆಯಿಂದಾಗಿ ಅಪಾರ ಮಕ್ಕಳು ವಿದ್ಯಾವಂತರಾಗಿದ್ದಾರೆ. ಅವರು ಮುಂದೆ ಉದ್ಯೋಗ ಪಡೆದು ಇನ್ನೊಬ್ಬರಿಗೆ ನೆರವು ನೀಡುವಂತಾಗಬೇಕು ಎಂದು ಶಾಸಕ ನರೇಂದ್ರ ಮೆಹ್ತಾ ನುಡಿದರು.
ಜೂ. 24 ರಂದು ಮೀರಾರೋಡ್‌ನ ಸೆಕ್ಟರ್ 10 ರಲ್ಲಿರುವ ಸ್ವಾಮಿ ನಾರಾಯಣ ಮಂದಿರದಲ್ಲಿ ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ, ಬಂಟರ ಸಂಘ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯ ಸಂಯೋಜನೆಯಲ್ಲಿ ನಡೆದ ವಾರ್ಷಿಕ ಆರ್ಥಿಕ ಸಹಾಯ ನೆರವು ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಈ ಬಾರಿ ಮೀರಾ-ಭಾಯಂದರ್ ಪರಿಸರದಲ್ಲಿ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದಕ್ಕೆ ಕಾಲೇಜುಗಳು ಕಡಿಮೆಯಿವೆೆ. ಅದಕ್ಕಾಗಿ ಈ ಪರಿಸರದಲ್ಲಿ ಕಾಲೇಜು ನಿರ್ಮಾಣಕ್ಕೆ ಸರಕಾರ ವಿಶೇಷವಾದ ನಿಯಮವೊಂದನ್ನು ಜಾರಿಗೆ ತರಲಿದೆ. ಆ ಮೂಲಕ ಮುಂಬಯಿ ಬಂಟರ ಸಂಘದ ಈ ಪ್ರಾದೇಶಿಕ ಸಮಿತಿ ಬಂಟರ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡುವ ಯೋಜನೆಗೆ ನಮ್ಮ ಎಲ್ಲಾ ರೀತಿಯ ಬೆಂಬಲವಿದೆ ಎಂದು ನುಡಿದರು.
ಕಾರ್ಯಕ್ರಮವನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕೋಶಾಧಿಕಾರಿ ಐಕಳ ಗುಣಪಾಲ್ ಶೆಟ್ಟಿ, ಪ್ರಾದೇಶಿಕ ಸಮಿತಿಯ ಪಶ್ಚಿಮ ವಲಯದ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬಿ., ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ಶೆಟ್ಟಿ, ಮೀರಾ-ಭಾಯಂದರ್ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕ ಅರುಣೋದಯ ರೈ, ಉಪ ಕಾರ್ಯಾಧ್ಯಕ್ಷರುಗಳಾದ ಎಲಿಯಾಳ ಉದಯ ಹೆಗ್ಡೆ, ಮುನ್ನಲಾಯಿಗುತ್ತು ಸಚ್ಚಿದಾನಂದ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಾಪಾಡಿಗುತ್ತು, ಕೋಶಾಧಿಕಾರಿ ಉದಯ ಶೆಟ್ಟಿ ಪೆಲತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಮಿತಾ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಯಿಪ್ರಸಾದ್ ಪೂಂಜಾ, ಜತೆ ಕಾರ್ಯದರ್ಶಿ ಶಂಕರ ಶೆಟ್ಟಿ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ಶೆಟ್ಟಿ, ಕಾರ್ಯದರ್ಶಿ ನಿಧಿ ಶೆಟ್ಟಿ, ಕೋಶಾಧಿಕಾರಿ ರಮೇಶ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಅಡ್ಯಾರು ಉಪಸ್ಥಿತರಿದ್ದರು. ಗಿರೀಶ್ ಶೆಟ್ಟಿ ತೆಳ್ಳಾರ್ ಸ್ವಾಗತಿಸಿದರು. ಬಾಬಾ ಪ್ರಸಾದ್ ಅರಸ ಕಾರ್ಯಕ್ರಮ ನಿರ್ವಹಿಸಿದರು. ರವೀಂದ್ರ ಶೆಟ್ಟಿ ವಂದಿಸಿದರು.