ಮುಂಬಯಿ: ಕಲ್ವಾ ಫ್ರೆಂಡ್ಸ್ ನ ದಶಮಾನೋತ್ಸವ ಮಾಟುಂಗದ ಮೈಸೂರು ಅಸೋಸಿಯೇಶನ್ ಸಭಾಗೃಹದಲ್ಲಿ ದಿನಪೂರ್ತಿ ನಡೆದ ಸಮಾರಂಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಶೈಕ್ಷಣಿಕ ದತ್ತು ಸ್ವೀಕಾರ ಹಾಗೂ ಜಾನಪದ ನೃತ್ಯ ಸ್ಪರ್ಧೆ
ನಡೆಯಿತು.
ಜಾನಪದ ನೃತ್ಯ ಸ್ಪರ್ಧೆಯಲ್ಲಿ ನಗರದ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಪ್ರಥಮ ಸ್ಥಾನವನ್ನು ಮೀರಾರೋಡ್‌ನ ವಿದುಷಿ ಅಮಿತಾ ಜತಿನ್ ನಿರ್ದೇಶನದ ಅಮಿತಾ ನೃತ್ಯ ಕಲಾಮಂದಿರ ತಂಡ ಮುಡಿಗೇರಿಸಿಕೊಂಡರು.
ಶ್ರೀ ಕಟೀಲು ಯಕ್ಷಕಲಾ ವೇದಿಕೆ ವಸಾಯಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಬಂಟರ ಸಂಘದ ಡೊಂಬಿವಲಿ ಪ್ರಾದೇಶಿಕ ಸಮಿತಿ ಪಡೆಯಿತು.
ಬಹುಮಾನ ವಿತರಣಾ ಸಮಾರಂಭದ ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಥಾಣೆ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಕುಶಲ್ ಸಿ. ಭಂಡಾರಿ, ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್. ಶೆಟ್ಟಿ, ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಸ್ಥಾಪಕಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಯೋಗಗುರು ಜಗದೀಶ್ ಶೆಟ್ಟಿ ಮತ್ತು ಉದ್ಯಮಿ ಚಂದ್ರಶೇಖರ್ ಎಸ್. ಶೆಟ್ಟಿ, ವರ್ತಕ್ ನಗರ ಕನ್ನಡ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ, ಉದ್ಯಮಿ, ಸಮಾಜ ಸೇವಕ ಅನಿಲ್ ಶೆಟ್ಟಿ ಸೂರಿಂಜೆ ಮತ್ತು ಮುಲುಂಡ್ ಫ್ರೆಂಡ್ಸ್ ನ ಅಧ್ಯಕ್ಷ ಸುರೇಶ್ ಶೆಟ್ಟಿ ಯೆಯ್ನಾಡಿ, ಕೋಲಿವಾಡಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರರಾದ ಕುಸುಮಾ ಬಿ. ಶೆಟ್ಟಿ, ಸುನೀಲ್ ಆಳ್ವ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಗೌರವ ಕೋಶಾಧಿಕಾರಿ ಶಿವಪ್ರಸಾದ್ ಆಳ್ವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗನಿರ್ದೇಶಕ ಬಾಬಾ ಪ್ರಸಾದ್ ಆಳ್ವ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕಲ್ವಾ ಫ್ರೆಂಡ್ಸ್‌ನ ಅಧ್ಯಕ್ಷ ರಘುರಾಮ್ ಎನ್. ಶೆಟ್ಟಿ, ಉಪಾಧ್ಯಕ್ಷರುಗಳಾದ ನೀತಾ ಆರ್. ಶೆಟ್ಟಿ, ಪುಷ್ಪರಾಜ್ ಎಲ್. ಶೆಟ್ಟಿ, ಕಾರ್ಯದರ್ಶಿ ವಿಜಯ್ ಎಸ್. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಮಧುರಾ ಎಸ್. ಶೆಟ್ಟಿ, ಸಂಗೀತಾ ಶೆಟ್ಟಿಗಾರ್, ಕೋಶಾಧಿಕಾರಿ ಶಿವಪ್ರಸಾದ್ ಎಸ್. ಆಳ್ವ, ಜತೆ ಕೋಶಾಧಿಕಾರಿಗಳಾದ ಸುಪ್ರಿತಾ ಎಂ. ಶೆಟ್ಟಿ, ಪ್ರಕಾಶ್ ಪೂಜಾರಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ : ಸುಭಾಷ್ ಶಿರಿಯಾ